ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ, ಮೈಸೂರು ವತಿಯಿಂದ ದಸರಾ ವಸ್ತು ಪ್ರದರ್ಶನ -2025 ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 22 ರಂದು ಸಂಜೆ 7.30 ಗಂಟೆಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ, ದೊಡ್ಡಕೆರೆ ಮೈದಾನದಲ್ಲಿ ಹಮಿಕೊಳ್ಳಲಾಗಿದೆ.
ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಅವರ ಘನ ಉಪಸ್ಥಿತಿಯಲ್ಲಿ, ‘ಎ’ ಬ್ಲಾಕ್ ಮಳಿಗೆಗಳ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ಮಾಡಲಿದ್ದಾರೆ. ಭಾರತೀಯ ವಾಯು ಮತ್ತು ನೌಕ ಸೇನೆ ಮಳಿಗೆ ಉದ್ಘಾಟನೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರು ಮಾಡಲಿದ್ದಾರೆ. ನೂತನ ಸಂಗೀತ ಕಾರಂಜಿ ಉದ್ಘಾಟನೆಯನ್ನು ಕಾನೂನು. ಸಂಸದಿಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ಅವರು ಮಾಡಲಿದ್ದಾರೆ. ಸರ್ಕಾರಿ ಮಳಿಗೆಗಳ ಉದ್ಘಾಟನೆಯನ್ನು ವಸತಿ ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ ಝಡ್. ಆಮೀರ್ ಅಹ್ಮದ್ ಖಾನ್ ಅವರು ಮಾಡಲಿದ್ದಾರೆ. ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ನ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನ ಸಭೆಯ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.