ಹುಣಸೂರು ತಾಲೂಕು ಹೊಸರಾಮನಹಳ್ಳಿಯ ದೇವಾಲಯದ ಪರಿಸರವನ್ನು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಸ್ವಚ್ಛಗೊಳಿಸಿದರು. ಮೇಲ್ವಿಚಾರಕ ಕಿರಣ್‌ಕುಮಾರ್, ಶಿವಶಂಕರ್ ಇತರರು ಇದ್ದರು. 
ನ್ಯೂಸ್

ದೇಗುಲಗಳ ಆವರಣ ಸ್ವಚ್ಛ

ಹುಣಸೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೋಳನಹಳ್ಳಿ ವಲಯದ ಹೊಸರಾಮನಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಹಾಗೂ ಶ್ರೀ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಶನಿವಾರ ದೇವಾಲಯಗಳ ಆವರಣದಲ್ಲಿ ಒಕ್ಕೂಟದ ಸದಸ್ಯರು ಶುಚಿಗೊಳಿಸುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು. ವಲಯ ಮೇಲ್ವಿಚಾರಕ ಕಿರಣ್‌ಕುಮಾರ್ ಮಾತನಾಡಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನದ ಅಂಗವಾಗಿ ಇಡೀ ರಾಜ್ಯಾದ್ಯಂತ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸ್ವಚ್ಛತೆ ಮಾಡುವಂತಹ ಕಾರ್ಯಕ್ರಮವನ್ನು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹಮ್ಮಿಕೊಂಡಿದ್ದಾರೆ. ಇದರ ಪ್ರಯುಕ್ತ ಬೋಳನಹಳ್ಳಿ ವಲಯದ ಸುಮಾರು ಹತ್ತು ಗ್ರಾಮಗಳಲ್ಲಿ ದೇವಸ್ಥಾನಗಳನ್ನು ಸ್ವಚ್ಛತೆ ಮಾಡಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲಿನ ಆವರಣದಲ್ಲಿ ಕಸ ಹಾಕದಂತೆ ಗ್ರಾಮೀಣರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಕೃಷಿ ಮೇಲ್ವಿಚಾರಕ ಶಿವಶಂಕರ್, ದೇವಸ್ಥಾನ ಕಮಿಟಿಯ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.