ಸಾಲಿಗ್ರಾಮ: ದೇವಸ್ಥಾನಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ತಾಲೂಕಿನ ಮುಂಡೂರು ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಉದ್ಘಾಟಿಸಿ ಮಾತನಾಡಿದರು. ಅನಾದಿ ಕಾಲದಿಂದಲೂ ದೇವರ ಬಗ್ಗೆ ಅಪಾರ ನಂಬಿಕೆ ಇದೆ. ಹಾಗಾಗಿ ದೇವರ ಕೆಲಸವನ್ನು ಮಾಡುವ ಸಂದರ್ಭದಲ್ಲಿ ವೈಮನಸ್ಸು ಮರೆಯಬೇಕು. ಜಾತಿ, ಪಕ್ಷಬೇಧ ಮರೆತು ಒಗ್ಗಟ್ಟಿನಿಂದ ಆಚರಿಸುವಂತಾಗಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಚಾಲನೆ ನೀಡಿದರು. ಬಳಿಕ ದೇವಸ್ಥಾನ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ರವಿಶಂಕರ್ ಅವರನ್ನು ಅಭಿನಂದಿಸಿದರು.
ಕಾಂಗ್ರೆಸ್ ಎಸ್‌ಟಿ ಘಟಕದ ರಾಜ್ಯ ಉಪಾಧ್ಯಕ್ಷ ಕಲ್ಲಹಳ್ಳಿ ಶ್ರೀನಿವಾಸ್, ಜಿಲ್ಲಾ ಕಾರ್ಯದರ್ಶಿ ಮಹದೇವನಾಯಕ, ಜಿಲ್ಲಾ ಹಿರಿಯ ಕಾರ್ಯದರ್ಶಿ ಸಂದೇಶ್, ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ತಾಲೂಕು ಅಧ್ಯಕ್ಷ ಮುಂಡೂರ್ ಸಂತೋಷ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನುಷಾ ವಿಶ್ವನಾಥ್, ಮುಖಂಡರಾದ ತಮ್ಮೇಗೌಡ, ಸ್ವಾಮಿಗೌಡ, ನ್ಯಾಯಬೆಲೆ ಅಂಗಡಿ ರಮೇಶ್, ಎಂ.ಡಿ.ಶ್ರೀಧರ್, ರಘು, ನಾಗರಾಜಯ್ಯ, ರಾಜನಾಯಕ, ಸ್ವಾಮಿ, ನಾಗಣ್ಣ, ರಂಗೇಗೌಡ, ದೇವಪ್ಪ ಇತರರಿದ್ದರು.