ಮೈಸೂರು: ಎರಡು ಬಾರಿ ಕರ್ನಾಟಕದ ಸಿಎಂ ಆಗಿ ಅಪಾರ ಅನುಭವ ಹೊಂದಿರುವ ಕುಮಾರಸ್ವಾಮಿ ಅವರಿಗೆ ಜನರ ಸಮಸ್ಯೆಗಳನ್ನು ಬಗೆಹರಿಸುವ ಆಸಕ್ತಿ ಹೊಂದಿರುವ ರಾಜಕಾರಣಿಯಾಗಿದ್ದಾರೆ. ಇವರು ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವುದರಿಂದ ಇಡೀ ದೇಶಕ್ಕೆ ಅನುಕೂಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ತಿಳಿಸಿದ್ದಾರೆ.
ರೈತರು ಮತ್ತು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಕುಮಾರಸ್ವಾಮಿ ಶ್ರಮಿಸಿದ್ದಾರೆ. ಕುಮಾರಸ್ವಾಮಿ ಅವರು ಕೇಂದ್ರದ ಸಂಪುಟ ಸಚಿವರಾಗಿ ಎಲ್ಲರ ಕಲ್ಯಾಣಕ್ಕಾಗಿ ಶ್ರಮಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಜನರು ಸಂಕಷ್ಟಕ್ಕೆ ಸಿಕ್ಕ ಸಂದರ್ಭದಲ್ಲೇಲ್ಲ ಕುಮಾರಸ್ವಾಮಿ ಅವರು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಸದನದಲ್ಲಿ ಬಡವರ ಪರ, ರೈತರ ಪರವಾಗಿ ನೇರ, ಗಟ್ಟಿ ಧ್ವನಿಯಲ್ಲಿ ಮಾತನಾಡಿ, ನ್ಯಾಯಾ ಕೊಡಿಸಿದ್ದಾರೆ. ಜನರ ಮೇಲೆ ಪ್ರೀತಿ, ಕಾಳಜಿ ಇರುವ, ಅವರ ಸಮಸ್ಯೆಗಳನ್ನು ಬಗೆಹರಿಸಿ ಅವರ ಸೇವೆ ಮಾಡಬೇಕು ಎನ್ನುವ ಉತ್ತಮ ಮನಸ್ಸುವುಳ್ಳ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕಿದೆ. ಇದರಿಂದ ಕೇವಲ ಕರ್ನಾಟಕದ ಜನರಿಗಷ್ಟೆ ಅಲ್ಲದೆ ದೇಶದ ಎಲ್ಲ ರಾಜ್ಯದ ಬಡ, ಹಿಂದುಳಿದ, ರೈತರಿಗೆ ದೊಡ್ಡ ಮಟ್ಟದಲ್ಲಿ ಒಳ್ಳೆಯದಾಗುತ್ತದೆ ಎಂದು ಅವರು ತಿಳಿಸಿದ್ದಾರೆ.