ಬೆಟ್ಟದಪುರ: ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸುವಾಗ ಪಾಲಕರು ಎಚ್ಚರ ವಹಿಸಬೇಕು ಎಂದು ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಧರಣೇಶ್ ಹೇಳಿದರು.
ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಣೆ ತಡೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಆಸ್ತಿಯಾಗಿರವ ಮಕ್ಕಳ ರಕ್ಷಣೆ ಬಗ್ಗೆ ನಾವೆಲ್ಲರೂ ಹೆಚ್ಚಿನ ಜವಾಬ್ದಾರಿಯಿಂದ ಇರಬೇಕು. ಇತ್ತೀಚೆಗೆ ದೇಶದಲ್ಲಿ ಮಕ್ಕಳ ಕಳವು ಪ್ರಕರಣಗಳು ಹೆಚ್ಚಾಗಿದ್ದು, ಇದನ್ನು ತಡೆಯುವ ಕುರಿತು ಸ್ಥಳೀಯರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಕೆ.ಶ್ರೀದೇವಿ, ಕಾರ್ಯದರ್ಶಿ ಎಚ್.ಪಿ.ಕುಮಾರ್, ಬಿಲ್ ಕಲೆಕ್ಟರ್ ಎಚ್.ಪಿ.ರಮಣಯ್ಯ, ಅಂಗನವಾಡಿ ಕಾರ್ಯಕರ್ತೆಯರಾದ ಎ.ಜೆ.ರತ್ನಾ, ಸಿ.ಕೆ.ಆಶಾ, ಸಿ.ಎಲ್.ಸುಧಾ, ಟಿ.ಎಸ್.ಹೇಮಾವತಿ ಇತರರಿದ್ದರು.