ಸೊರಬ ತಾಲೂಕಿನ ದುಗ್ಲಿ ಕ್ಷೇತ್ರದಲ್ಲಿ ಶ್ರೀರೇಣುಕಾಚಾರ್ಯ ಜಯಂತಿ, ರೇವಣಸಿದ್ದೇಶ್ವರ ಮಠದ ಸುವರ್ಣ ಮಹೋತ್ಸವ ಹಾಗೂ ಧರ್ಮ ಜಾಗೃತಿ ಸಮಾರಂಭದ ಉದ್ಘಾಟನೆ ನೆರವೇರಿಸಿ ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವಚನ ನೀಡಿದರು. ಸಂಸದ ಬಿ.ವೈ.ರಾಘವೇಂದ್ರ. ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸದಾಶಿವ ಶಿವಾಚಾರ್ಯರು, ಶ್ರೀ ಸೋಮನಾಥ ಶಿವಾಚಾರ್ಯರು ಇತರರಿದ್ದರು.  
ನ್ಯೂಸ್

ದೈವತ್ವದ ಕಡೆ ಸಾಗುವ ಮಾರ್ಗವೇ ಸಂಸ್ಕೃತಿ

ಸೊರಬ: ಧರ್ಮ ಮತ್ತು ಆಧ್ಯಾತ್ಮಿಕತೆ ಬದುಕಿಗೆ ಆಶಾಕಿರಣ. ಮಾನವತೆಯಿಂದ ದೈವತ್ವದ ಕಡೆಗೆ ಒಯ್ಯುವ ಮಾರ್ಗವೇ ಸಂಸ್ಕೃತಿ. ಪ್ರಗತಿಪರ ಧ್ಯೇಯೋದ್ದೇಶಗಳು ಮಾನವ ಜೀವನದ ಶ್ರೇಯಸ್ಸಿಗೆ ದಾರಿದೀಪ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಸ್ವಾಮೀಜಿ ಹೇಳಿದರು. ತಾಲೂಕಿನ ದುಗ್ಲಿ ಕ್ಷೇತ್ರದಲ್ಲಿ ಶ್ರೀರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಶ್ರೀರೇವಣಸಿದ್ಧೇಶ್ವರ ರಥೋತ್ಸವ, ಲಿಂ.ಶ್ರೀ ಮುರುಘೇಂದ್ರ ಶ್ರೀಗಳ 6ನೇ ವರ್ಷದ ಪುಣ್ಯಾರಾಧನೆ, ರೇವಣಸಿದ್ದೇಶ್ವರ ಮಠದ ಸುವರ್ಣ ಮಹೋತ್ಸವ, ಶ್ರೀರೇವಣಸಿದ್ಧೇಶ್ವರ ಶಿವಾಚಾರ್ಯರ ಪಟ್ಟಾಕಾರದ ದ್ವಾದಶ ವರ್ಧಂತಿ ಮಹೋತ್ಸವದ ಅಂಗವಾಗಿ ಜರುಗಿದ ಧರ್ಮ ಜಾಗತಿ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಸತ್ಯದಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಮೃತ್ಯುವಿನಿಂದ ಅಮೃತತ್ವದೆಡೆಗೆ ಕರೆದೊಯ್ಯುವುದೇ ಗುರುವಿನ ಪರಮ ಧರ್ಮ. ಆತ್ಮ ಶಕ್ತಿ ಇರುವಾಗ ಯಾವ ದುಷ್ಟ ಶಕ್ತಿ ಏನನ್ನೂ ಮಾಡಲಾರದು. ಆತ್ಮ ವಿಶ್ವಾಸ, ನಿಶ್ಚಿತ ಗುರಿ ಮತ್ತು ಸಂಯಮ, ಇವು ಮೂರು ಸಾಧನೆಯ ಹಾದಿಗೆ ಕರೆದೊಯ್ಯುವ ಅಂಶಗಳು. ಕಾಯಿಸಿದ ಚಿನ್ನ ಒಡವೆಯಾಗುತ್ತದೆ. ಬಡಿದ ತಾಮ್ರ ತಂತಿಯಾಗುತ್ತದೆ. ಕೆತ್ತಿದ ಕಲ್ಲು ಮೂರ್ತಿಯಾಗುತ್ತದೆ. ಸಂಸ್ಕಾರ ಸಚ್ಚಾರಿತ್ರ ್ಯದಿಂದ ಮನುಷ್ಯನ ಜೀವನ ವೌಲ್ಯ ಸಂವರ‌್ಸುತ್ತದೆ ಎಂದರು. ಸಮಾರಂಭ ಉದ್ಘಾಟಿಸಿದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು ಮಾತನಾಡಿ, ಕೆಡಕುಗಳನ್ನು ಮೆಟ್ಟಿ ನಿಂತು ಒಳಿತಿನತ್ತ ಹೆಜ್ಜೆ ಹಾಕುವುದೇ ಮಾನವನ ಗುರಿಯಾಗಬೇಕು. ದುಗ್ಲಿ ಶ್ರೀಗಳ ಶ್ರಮ ಸಾಧನೆಗೆ ಬೆಲೆ ಕಟ್ಟಲಾಗದೆಂದು ತಿಳಿಸಿದರು. ಸಂಸದ ಬಿ.ವೈ.ರಾಘವೇಂದ್ರ, ದುಗ್ಲಿ-ಕಡೇನಂದಿಹಳ್ಳಿ ಶ್ರೀರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಾರ್ಜುವಳ್ಳಿ ಶ್ರೀ ಸದಾಶಿವ ಶಿವಾಚಾರ್ಯರು, ಕನ್ನೂರು ಶ್ರೀ ಸೋಮನಾಥ ಶಿವಾಚಾರ್ಯರು, ಹಾರನಹಳ್ಳಿ ಶ್ರೀ ಶಿವಯೋಗಿ ಶಿವಾಚಾರ್ಯರು, ಗೋವಿನಕೋವಿ ಶ್ರೀ ಶಿವಯೋಗಿ ವಿಶ್ವಾರಾಧ್ಯ ಮಹಾಲಿಂಗ ಸ್ವಾಮೀಜಿ ಮತ್ತಿತರರಿದ್ದರು.

ಸಮಾಜದ ಓರೆಕೋರೆಗಳನ್ನು ತಿದ್ದಿ ತೀಡಿ ಮುನ್ನಡೆಸುವುದೇ ಮಹಾನುಭಾವರ ಕರ್ತವ್ಯ. ಧಾಮಿಕ ಮತ್ತು ಸಾಮಾಜಿಕ ವೌಲ್ಯಗಳು ಕಣ್ಮರೆಯಾದರೆ ಧರ್ಮ, ಸಂಸ್ಕೃತಿ ಉಳಿಯಲಾರದು. ಶ್ರಮದ ಬೆವರಿನ ಫಲ ಶಾಶ್ವತ ಮತ್ತು ಸುಖದಾಯಕ. ಎಲ್ಲರೂ ಧರ್ಮ ಪರಿಪಾಲನೆ ಮಾಡಬೇಕು. ಬಿ.ವೈ.ರಾಘವೇಂದ್ರ ಸಂಸದ