ನಂ.1 ಕನ್ನಡ ದೈನಿಕ ‘ವಿಜಯವಾಣಿ’ ಜೂ.21ರಂದು ಬೆಳಗ್ಗೆ 6ಕ್ಕೆ ನಗರದ ಶ್ರೀ ನಟರಾಜ ಶಿಕ್ಷಣ ಸಂಸ್ಥೆಯ ಒಳಾಂಗಣದಲ್ಲಿ ಶ್ರೀ ನಟರಾಜ ಪ್ರತಿಷ್ಠಾನ, ಶ್ರೀ ಹೊಸಮಠ, ಬಸವಮಾರ್ಗ ಫೌಂಡೇಷನ್ ಸಹಯೋಗದೊಂದಿಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಿದೆ.
ಶ್ರೀ ನಟರಾಜ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಚಿದಾನಂದ ಸ್ವಾಮೀಜಿ ಅವರ ಸಾನ್ನಿಧ್ಯ, ಪ್ರತಿಷ್ಠಾನದ ವಿಶೇಷಾಧಿಕಾರಿ ಡಾ.ಎಸ್.ಶಿವರಾಜಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಬಸವಜ್ಞಾನ ಮಂದಿರದ ಶ್ರೀ ಮಾತೆ ಬಸವಾಂಜಲಿ ಉದ್ಘಾಟಿಸುವರು. ಅತಿಥಿಯಾಗಿ ಬಸವಮಾರ್ಗ ಫೌಂಡೇಷನ್ ಸಂಸ್ಥಾಪಕ ಎಸ್.ಬಸವರಾಜು ಭಾಗವಹಿಸುವರು.
ಈ ಸಂದರ್ಭ ಆಯುರ್ವೇದ ವೈದ್ಯರು ಹಾಗೂ ಯೋಗ ಶಿಕ್ಷಕರಾದ ಡಾ.ಪೂರ್ಣ ತೇಜಸ್ವಿ, ಯೋಗ ಶಿಕ್ಷಕರಾದ ಶ್ರೀಹರಿ, ಸುಪ್ರಿಯಾ ಅವರನ್ನು ಸನ್ಮಾನಿಸಲಾಗುವುದು. ವಿಜಯವಾಣಿ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕ ಎಂ.ಆರ್. ಸತ್ಯನಾರಾಯಣ, ಶ್ರೀ ನಟರಾಜ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಪವಿತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಯೋಗ ಶಿಕ್ಷಕ ಎಚ್.ಪಿ.ನವೀನ್‌ಕುಮಾರ್ ನಿರ್ವಹಿಸಲಿದ್ದಾರೆ. ಬೆಳಗ್ಗೆ 6 ರಿಂದ ಸಾಮೂಹಿಕ ಯೋಗ ಪ್ರದರ್ಶನ ಆಯೋಜಿಸಲಾಗಿದೆ.