ನ್ಯೂಸ್

ನಗರಸಭೆಯಲ್ಲಿ 'ಇ' ಖಾತಾ ಅಭಿಯಾನ / ದಾಖಲೆಗಳೊಂದಿಗೆ ಭೇಟಿ ನೀಡಿ ಸದುಪಯೋಗ ಪಡಿಸಿಕೊಳ್ಳಿ / ಮಧ್ಯವರ್ತಿಗಳ ಅವಶ್ಯಕತೆ ಇಲ್ಲ / ಕೊತ್ತೂರು ಮಂಜುನಾಥ್

ವಿಜಯವಾಣಿ ಸುದ್ದಿಜಾಲ ಕೋಲಾರ

ನಗರ ಪ್ರದೇಶದಲ್ಲಿ ನಿವೇಶ, ಮನೆ, ಸೇರಿದಂತೆ ಹಲವು ರೀತಿಯ ಆಸ್ತಿಗಳನ್ನು ಹೊಂದಿರುವವರು ದಾಖಲೆ ಸಮೇತ ನಗರಸಭೆ ಕಛೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ ಖಾತಾ ಮಾಡಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕೋಲಾರ ನಗರವು ಜಿಲ್ಲಾ ಕೇಂದ್ರವಾಗಿದ್ದು, ನಗರ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲಾ ನಾಗರೀಕರು ತಾವು ಹೊಂದಿರುವ ಆಸ್ತಿಗಳಿಗೆ ಖಾತೆ ಮಾಡಿಸಲು ನಗರಸಭೆ ಕಛೇರಿಗೆ ಅಲೆಯುತ್ತಿರುವುದನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರದಿಂದ ನಕ್ಷಾ ಯೋಜನೆಗೆ ಕೋಲಾರ ನಗರವನ್ನು ಆಯ್ಕೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಫೆ.೧೮ ರಂದು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಿಲಿದ್ದಾರೆ ಎಂದು ತಿಳಿಸಿದರು.

ಫೆ.೧೮ ರಿಂದ ಮೂರು ತಿಂಗಳ ಕಾಲ ಖಾತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಖಾತೆ ಮಾಡಿಸಿಕೊಳ್ಳಲು ಯಾವುದೇ ಮಧ್ಯವರ್ತಿಗಳನ್ನು ನಂಬಬೇಡಿ ನಂಬಿದಲ್ಲಿ ಮೋಸ ಹೋಗುತ್ತೀರಿ. ಖಾತೆ ಮಾಡಲು ಯಾವುದೇ ಏಜೆಂಟರ ನೇಮಸಿರುವುದಿಲ್ಲ. ನೇರವಾಗಿ ಸಾರ್ವಜನಿಕರೇ ನಗರಸಭೆ ಕಛೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ ಕೂಡಲೇ ನಿಮ್ಮ ಮನೆಗಳ ಹಾಗೂ ಖಾಲಿ ನಿವೇಶನಗಳಿಗೆ ಖಾತೆಗಳನ್ನು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ನ್ಯಾಯಾಲದಲ್ಲಿರುವ ಆಸ್ತಿಗಳ ಖಾತೆ ಹೊರತು ಪಡಿಸಿ ಉಳಿದ ಯಾವುದೇ ರೀತಿಯ ನಿವೇಶನ, ಮನೆಗಳು ಇದ್ದರೂ ಅದಕ್ಕೆ ಸಂಬAದಿಸಿದ ದಾಖಲೆಗಳನ್ನು ಖುದ್ದಾಗಿ ನೀವೆ ಹೋಗಿ ಸಲ್ಲಿಸಿದರೆ ಸರ್ವೆ ಅಧಿಕಾರಿಗಳು ಸವೇ ನಡೆಸಿ, ನಿಮ್ಮ ಆಸ್ತಿಗಳ ಖಾತೆಗಳನ್ನು ಒಂದು ವಾರದಲ್ಲಿ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಲಾರ ಜನತೆಗೆ ಇದೊಂದು ಸುವರ್ಣವಕಾಶ ಕಲ್ಪಿಸಲಾಗಿದೆ. ಸಮಯ ವ್ಯರ್ಥ ಮಾಡದೇ ಕೂಡಲೇ ನಿಮ್ಮ ನಿಮ್ಮ ಆಸ್ತಿಗಳಿಗೆ ಎ ಖಾತ ಅಥವ ಬಿ ಖಾತ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು.

ಚಿತ್ರ ೧೭ ಕೆ.ಎಲ್.ಆರ್. ೦೫ : ಶಾಸಕ ಕೊತ್ತೂರು ಮಂಜುನಾಥ್ ರವರ ಭಾವಚಿತ್ರ