ನಗರದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುವ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಡಳಿತ ನಟ ಯುವ ರಾಜ್‌ಕುಮಾರ್‌ಗೆ ಆಹ್ವಾನ ನೀಡಿತು.
ಬೆಂಗಳೂರಿನಲ್ಲಿರುವ ಯುವ ರಾಜ್‌ಕುಮಾರ್ ನಿವಾಸಕ್ಕೆ ತೆರಳಿದ ಜಿಲ್ಲಾಡಳಿತ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಫಲ, ತಾಂಬೂಲ ಮತ್ತು ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.
ಯುವ ಸಂಭ್ರಮ ಕಾರ್ಯಕ್ರಮ ಸೆ.10ರಿಂದ 17ರವರೆಗೆ ಎಂಟು ದಿನಗಳ ಕಾಲ ನಗರದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ರಾಜ್ಯದ ಎಲ್ಲ ಸ್ನಾತಕೋತ್ತರ, ಪದವಿ, ಪಿಯು ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಚಿತ್ರನಟ ಯುವರಾಜ್ ಕುಮಾರ್ ಸೇರಿದಂತೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.