ನ್ಯೂಸ್

ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಮಂಗಳೂರು: ನಗರದ ಕೊಡಿಯಾಲ್‌ಬೈಲ್ ಮಾನಸ ಟವರ್ ಬಳಿ ಶನಿವಾರ ಮಧ್ಯಾಹ್ನ ಟಾಟಾ ಇಂಡಿಕಾ ಕಾರು ಚಲಿಸುತ್ತಿದಾಗಲೇ ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ.
 ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಚಾಲಕ ತಕ್ಷಣ ಕಾರು ಬದಿಗೆ ಸರಿಸಿ, ಹೊರಗೆ ಬಂದಿದ್ದಾರೆ.  ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ಶಮನಗೊಳಿಸಿದ್ದಾರೆ. ಘಟನೆಯಿಂದ ಯಾರಿಗೂ ಗಾಯವಾಗಿಲ್ಲ. ಸ್ಥಳದಲ್ಲಿ ನೂರಾರು ಮಂದಿ ಕುತೂಹಲಿಗಳು ಜಮಾಯಿಸಿದ್ದು, ಪೊಲೀಸರು ಅವರನ್ನು ಚದುರಿಸಿದರು.