ನ್ಯೂಸ್

ನಮ್ಮ ಶಾಸಕರು ಒಗ್ಗಟ್ಟಾಗಿದ್ದಾರೆ ಎಚ್ಡಿಕೆ

ಜೆಡಿಎಸ್ ಪಕ್ಷದ ಎಲ್ಲ ಶಾಸಕರೂ ಒಗ್ಗಟ್ಟಾಗಿ ಇದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಅದನ್ನೇ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಬೆಳಗಾವಿಯಲ್ಲಿ ಶಾಸಕರು ಕೂತು ಮಾತನಾಡಿದ್ದಾರೆ. ನಮ್ಮ ಶಾಸಕರು ನಮ್ಮ ಜೊತೆ ಇರುತ್ತಾರೆ ಎಂದರು.

ಶಾಸಕ ಜಿ.ಟಿ.ದೇವೇಗೌಡರ ನಡುವಿನ ಮುನಿಸು ಗಂಡ ಹೆಂಡತಿಯ ಮುನಿಸು. ಗಂಡ- ಹೆಂಡತಿ ಜಗಳ ಉಂಡು ಮಲಗುವ ತನಕ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆದಿಲ್ಲ. ಇನ್ನು ನಮ್ಮ ಪಕ್ಷದಲ್ಲಿ ಸಾಂಸ್ಥಿಕ ಚುನಾವಣೆಗಳು ನಡೆಯಬೇಕು. ಆ ನಂತರ ರಾಜ್ಯಾಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.