ಬೆಟ್ಟದಪುರ ಮಹಾಶಕ್ತಿ ಕೇಂದ್ರದಲ್ಲಿ ಆಯೋಜಿಸಿದ್ದ ಮಹಾ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕುರಿತ ಕರಪತ್ರವನ್ನು ವಿತರಣೆ ಮಾಡಲಾಯಿತು. ಮಂಗಳಾ ಸೋಮಶೇಖರ್, ರಾಜೇಗೌಡ, ರಾಜೇಂದ್ರ, ಪ್ರಶಾಂತ್ ಗೌಡ, ಮೈಲಾರಿ ಇದ್ದರು. 
ನ್ಯೂಸ್

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಹಕರಿಸಿ

ಬೆಟ್ಟದಪುರ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಮತ್ತು ಸಾಧನೆಗಳ ಕುರಿತು ತಿಳಿಸಲು ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ತಿಳಿಸಿದರು.

ಇಲ್ಲಿನ ಮಹಾಶಕ್ತಿ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದ ಅಭಿವೃದ್ಧಿ ಕಾರ್ಯಗಳು, ಮೂಲ ಸೌಕರ್ಯಗಳ ಯೋಜನೆಗಳ ಯಶಸ್ವಿ ಅನುಷ್ಠಾನ, ಸಾಮಾಜಿಕ ಸುರಕ್ಷತಾ ಯೋಜನೆಗಳು ಜಾರಿ ಸೇರಿದಂತೆ ಅನೇಕ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು, ಇದನ್ನು ಪ್ರತಿ ಮನೆಗೆ ತಲುಪಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಆ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಪಕ್ಷದ ಮುಖಂಡ ಪ್ರಶಾಂತ್‌ಗೌಡ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ನಮಗೆ ಈ ಬಾರಿ ತಾಲೂಕಿನಲ್ಲಿ ಸೋಲುಂಟಾ ಗಿದ್ದರೂ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚು ಬೆಂಬಲ ನೀಡುವ ಮುಖಾಂತರ ದೇಶದ ಸವಾರ್ಂಗೀಣ ಅಭಿವೃದ್ಧಿಗೆ ಸಹಕರಿಸಬೇಕು. ಇದಕ್ಕಾಗಿ ಈಗಿನಿಂದಲೇ ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಎಂ.ಎಂ ರಾಜೇಗೌಡ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೈಲಾರಿ, ಕಾರ್ಯದರ್ಶಿ ಅರುಣ್ ರಾಜೇಅರಸ್, ಜಿಲ್ಲಾ ಕಾರ್ಯದರ್ಶಿ ಬಾಲಣ್ಣ, ಮುಖಂಡರಾದ ಕೊಪ್ಪ ರಾಜೇಂದ್ರ, ಸುಂದರ್, ಕೆಂಡಗಣ್ಣಶೆಟ್ಟಿ, ರಾಜು, ಮಧು, ಪಾಪಣ್ಣ, ಲೋಕೇಶ್, ವೀರಭದ್ರ, ಮೋಹನ್, ಮನುಗೌಡ ಇತರರು ಇದ್ದರು.