ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ವೈದ್ಯ ಹಾಗೂ ಎಚ್.ಸಿ.ಐ.ಎ.ಕೆ ಚೇರ್ಮೆನ್ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರಿನಲ್ಲಿ ದೂರು ದಾಖಲಿಸಿದ್ದಾರೆ.
ಕರೊನಾ ಸಂಕಷ್ಟದ ಕಾಲದಲ್ಲೂ ಖಾಸಗಿ ನರ್ಸಿಂಗ್ ಹೋಮ್‌ಗಳು ಜನರಿಂದ ನಡೆಸುವ ಸುಲಿಗೆಯನ್ನು ಕೂಡಲೇ ನಿಲ್ಲಿಸದಿದ್ದರೆ ಜನರಿಗೆ ಹೇಳಿ ತಾನೇ ಹೊಡೆಸುತ್ತೆನೆ. ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂಧೆ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಇಲ್ಲದಿದ್ದರೆ ನಾನು ಸುಮ್ಮನಿರುವುದಿಲ್ಲ. ನಾನೇ ಜನರಿಗೆ ಹೇಳಿ ಆಸ್ಪತ್ರೆಗೆ ನುಗ್ಗಿ ಹೊಡೆಯಬೇಕಾಗುತ್ತದೆ ಎಂದು ಸುಲಿಗೆ ಮಾಡುತ್ತಿರುವ ಹಲವು ನರ್ಸಿಂಗ್ ಹೋಮ್ ಗಳ ಬಗ್ಗೆ ಇತ್ತೀಚಿಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತ ಪಡಿಸಿದ್ದರು.