ನ್ಯೂಸ್

ನಾನು ಲಾಭಿಮಾಡುವ ವ್ಯಕ್ತಿ ಅಲ್ಲ : ಎಸ್.ಎ.ರಾಮದಾಸ್

ಮೈಸೂರು: ಸಚಿವ ಸ್ಥಾನಕ್ಕಾಗಿ ನಾನು ಯಾವುದೇ ಲಾಬಿ ಮಾಡಿಲ್ಲ. ತಂದೆ ಸ್ಥಾನದಲ್ಲಿ ‌ಇರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲವನ್ನೂ ಸರಿ ಪಡಿಸುತ್ತಾರೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ದೇಶದ ಹಿರಿಯ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸುತ್ತಿರುವ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವು ಶಾಸಕರಾಗಿ ಕೆಲಸ ಮಾಡುತ್ತಿದ್ದೇವೆ. ನಾನು ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಜನರ ಋಣ ತೀರಿಸಲು ಕೊನೆಯವರೆಗೂ ದುಡಿಯುತ್ತೇನೆ ಎಂದು ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಡಳಿತ ಪಕ್ಷ ಟೀಕಿಸುವುದು ಅನಿವಾರ್ಯ. ಹಾಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರ ಎಂದು ಪ್ರಶ್ನೆಗೆ ಉತ್ತರಿಸಿದರು.