ಯಾದಗಿರಿ: ಸುರೇಶ ಅಂಗಡಿ ನಿಧನದ ಹಿನ್ನೆಲೆಯಲ್ಲಿ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ನಾನು ಆಕಾಂಕ್ಷಿ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ ಜಾರಕೊಹೊಳಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಲೋಕಸಭಾ ಚುನಾವಣೆಗೆ ನಾನೂ ಆಕಾಂಕ್ಷಿ ಎಂದು ಪಕ್ಷದ ಹೈಕಮಾಂಡ್ಗೆ ತಿಳಿಸಿದ್ದೇನೆ. ಈ ಬಗ್ಗೆ ಮೇಲ್ಮಟ್ಟದಲ್ಲಿ ಚರ್ಚೆ ನೆಡೆಯುತ್ತಿದೆ. ಪಕ್ಷದ ಹೈಕಮಾಂಡ್ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ರೈತರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಭಯೋತ್ಪಾದಕರು ಎಂದು ಕರೆಯುವ ಮೂಲಕ ರೈತ ಸಮೂಹವನ್ನು ಅಪಮಾನ ಮಾಡಿದ್ದಾರೆ. ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿದ್ದು ಅದಕ್ಕೆ ರೈತರು ಕಾರಣರಲ್ಲ ಎಂದು ಈಗಾಘಲೇ ರೈತ ಸಂಘಟನೆಗಳು ಸ್ಪಷ್ಟಪಡಿಸಿವೆ. ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರದ್ದುಗೊಳಿಸುವವರೆಗೂ ನಡೆಯುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದರು.
ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಈ ಬಗ್ಗೆ ಅವಶ್ಯವಿದ್ದಲ್ಲಿ ಹೋರಾಟ ತಿವೃ ಗೊಳಿಸಲಾಗುವುದು. ರಾಜ್ಯದಲ್ಲಿ ಕಾನೂನ ಸುವ್ಯವಸ್ಥೆ ಹದಗೆಟ್ಟಿದೆ. ಖಾತೆಗಳ ಹಂಚಿಕೆಯಿಂದ ಸಚಿವರಲ್ಲಿ ಅಸಮಧಾನ ತಾಂಡವಾಡುತ್ತಿದೆ. ಭ್ರಷ್ಟಚಾರ ಮೀತಿಮಿರಿದ್ದು, ಸರ್ಕಾರ ದ ಆಡಳಿತ ವೈಫಲ್ಯದಿಂದಾಗಿ ಜನತೆ ನಿತ್ಯ ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.