ರಾಯಚೂರಿನ ಪೂರ್ಣಿಮಾ ಚಿತ್ರಮಂದಿರದ ಮುಂಭಾಗದಲ್ಲಿನ ರಸ್ತೆಯಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹರಿಯುತ್ತಿರುವುದು. 
ನ್ಯೂಸ್

ನಾಳೆ 10 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಸೆ.30ರಂದು ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕೊನೆ: ಈ ಬಾರಿ ಮುಂಗಾರು ಬುಧವಾರ(ಸೆ.30) ಕೊನೆಗೊಳ್ಳಲಿದೆ. ವಾಡಿಕೆಯಂತೆ ರಾಜ್ಯಕ್ಕೆ ಆಗಮಿಸಿದ್ದ ಮುಂಗಾರು ಮಳೆ ಉತ್ತಮವಾಗಿತು. ರಾಜ್ಯದ ಕೆಲ ಭಾಗಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಮಳೆಯಾದರೆ ಇತರೆ ಪ್ರದೇಶಗಳಲ್ಲಿ ಕಡಿಮೆ ಮಳೆಯಾಗಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.