ನ್ಯೂಸ್

ನಿಖಿಲ್ ಕುಮಾರಸ್ವಾಮಿ ಬಗ್ಗೆ ಸಿಎಂ ವ್ಯಂಗ್ಯ

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿಮಾಡಿದ್ದಾರೆ.

ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೇ ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ನಿಖಿಲ್ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಸಿಎಂ ವ್ಯಂಗ್ಯವಾಡಿದರು.

ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ಇದೇ ವೇಳೆ ತಿಳಿಸಿದರು.