ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಕ್ತಿತ್ವ ವಿಕಸನ ಮತ್ತು ಕೌಶಲ ಅಭಿವೃದ್ಧಿ ಕಾರ್ಯಕ್ರಮದಲ್ಲಿ ನಿವೃತ್ತ ಸಹ ಪ್ರಾಧ್ಯಾಪಕ ಕೆ.ಟಿ.ರಮೇಶ್ ಮಾತನಾಡಿದರು. ಡಾ. ಧನಂಜಯ, ಎ.ಪಿ.ಚಂದ್ರಪ್ಪ, ಆರ್.ಪ್ರಸಾದ್, ಜಿ.ಸವಿತಾ, ದಿನಕರನಾಯ್ಕ ಇದ್ದರು. 
ನ್ಯೂಸ್

ನಿರಂತರ ಪ್ರಯತ್ನದಿಂದ ಗುರಿ ಸಾಧನೆ

ಎನ್.ಆರ್.ಪುರ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ್ಟ ಗುರಿ ಇಟ್ಟುಕೊಂಡು ಅದನ್ನು ಮುಟ್ಟುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡಬೇಕು ಎಂದು ನಿವೃತ್ತ ಸಹ ಪ್ರಾಧ್ಯಾಪಕ ಕೆ.ಟಿ.ರಮೇಶ್ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆದ ವ್ಯಕ್ತಿತ್ವ ವಿಕಸನ ಮತ್ತು ಕೌಶಲ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಜತೆಗೆ ಕೌಶಲ ಬೆಳೆಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳೂ ಶಿಸ್ತುಪಾಲನೆ, ಸ್ಪರ್ಧಾತ್ಮಕ ಮನೋಭಾವನೆ, ಡಿಜಿಟಲ್ ಕೌಶಲ, ಸಮಯ ಪಾಲನೆ, ನೈತಿಕತೆ ರೂಢಿಸಿಕೊಳ್ಳಬೇಕು. ಉದ್ಯೋಗ ಕೌಶಲ ಸಂವಹನ, ಸಂದರ್ಶನ ಕಲೆಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಡಾ. ಧನಂಜಯ ಮಾತನಾಡಿ, ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಎ.ಪಿ.ಚಂದ್ರಪ್ಪ, ಐಕ್ಯೂಎಸಿ ಸಂಚಾಲಕ ಆರ್.ಪ್ರಸಾದ್, ಕನ್ನಡ ವಿಭಾಗದ ಮುಖ್ಯಸ್ಥೆ ಜಿ.ಸವಿತಾ, ಸಮಾಜ ಕಾರ್ಯ ವಿಭಾಗದ ಸಹಪ್ರಾಧ್ಯಾಪಕ ದಿನಕರ ನಾಯ್ಕ ಇದ್ದರು.