ತರೀಕೆರೆ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕು ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ಆರ್.ಗಿರೀಶ್ ಅವರನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿನಂದಿಸಿದರು. ವಸಂತ್‌ಕುಮಾರ್, ಎಚ್.ಯು.ಾರೂಕ್, ಟಿ.ಎಸ್.ಪ್ರಕಾಶ್ ವರ್ಮ, ಟಿ.ಎಸ್.ಧರ್ಮರಾಜ್, ಕೆ.ರವಿಕಿಶೋರ್ ಇತರರಿದ್ದರು. 
ನ್ಯೂಸ್

ನಿಷ್ಠಾವಂತರಿಗೆ ಕಾಂಗ್ರೆಸ್‌ನಲ್ಲಿ ಉತ್ತಮ ಅವಕಾಶ

ತರೀಕೆರೆ: ಸಿಎಂ ಸಿದ್ದರಾಮಯ್ಯ ಆಡಳಿತವನ್ನು ರಾಜ್ಯದ ಜನತೆ ಮೆಚ್ಚಿದ್ದು ಅವರ ನೇತೃತ್ವದಲ್ಲಿ ಕಾಂಗ್ರೆಸ್ ಬಲಗೊಳ್ಳುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕು ಕಾಂಗ್ರೆಸ್ ಕಿಸಾನ್ ಸೆಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟಿ.ಆರ್.ಗಿರೀಶ್ ಅವರನ್ನು ಅಭಿನಂದಿಸಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವವರಿಗೆ ಉತ್ತಮ ಅವಕಾಶ ನೀಡಲಾಗುತ್ತಿದೆ ಎಂದರು.

ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಾರೂಕ್, ಪುರಸಭೆ ಮಾಜಿ ಅಧ್ಯಕ್ಷರಾದ ಟಿ.ಎಸ್.ಪ್ರಕಾಶ್ ವರ್ಮ, ಟಿ.ಎಸ್.ಧರ್ಮರಾಜ್, ಮುಖಂಡರಾದ ಬಿ.ರವಿಕುಮಾರ್, ಕೆ.ರವಿ ಕಿಶೋರ್, ಟಿ.ಜೆ.ಮಂಜುನಾಥ್, ಟಿ.ಎನ್.ಜಗದೀಶ್ ಮತ್ತಿತರರಿದ್ದರು.