ನ್ಯೂಸ್

ನೀರಿಗಾಗಿ ಹೋರಾಡಬೇಕಿರುವುದು ಅನಿವಾರ್ಯ : ಹೋರಾಟ ಯಶಸ್ವಿಯಾಗಲಿ ಎಂದ ಮುರುಘಾ ಶರಣರು

ಬಿಡದಿ: ದಕ್ಷಿಣ ಕರ್ನಾಟಕದಲ್ಲಿ ಮೇಕೆದಾಟು, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಳಿಗಾಗಿ ಹೋರಾಟ ನಡೆಯುತ್ತಿದ್ದು, ನೀರಿಗಾಗಿ ಹೋರಾಟ ವಾಡಬೇಕಾಗಿರುವುದು ಈ ಕಾಲಟ್ಟದ ಜನರಿಗೆ ಅನಿವಾರ್ಯವಾಗಿದೆ. ಎಂದು ಚಿತ್ರದುರ್ಗದ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಬಿಡದಿ ಕೇತಗಾನಹಳ್ಳಿಯ ಬಳಿ ಇತರ ಸ್ವಾಮೀಜಿಗಳ ಜತೆ ಪಾದಯಾತ್ರೆ ಸೇರಿಕೊಂಡ ಶ್ರೀಗಳು ಮಾತನಾಡಿ, ರಾಜ್ಯದಲ್ಲಿ ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಹೋರಾಟಗಳು ನಡೆಯುತ್ತಿವೆ. ನಮ್ಮ ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುವಾರ್ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕೆಂಬ ಅಪೇಕ್ಷೆಯಿಂದಲೇ ಅನೇಕ ಸ್ವಾಮೀಜಿಗಳ ಜತೆ ಭಾಗವಹಿಸಿದ್ದು, ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸಿದರು.

ಸ್ವಾಮಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸವಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದಾಗಿದೆ. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಹವಾ ನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುವಾರ್ ಪಾದಯಾತ್ರೆ ವಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದರು.