ನ್ಯೂಸ್

ನೂರೈವತ್ತು ಅಡಿ ಉದ್ದದ ರಾಷ್ಟ್ರಧ್ವಜದೊಂದಿಗೆ ಪಥಸಂಚಲನ

ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆ. ೧೩ ರಂದು ಬೆಳಗ್ಗೆ ೧೦ ಗಂಟೆಗೆ ಹುಬ್ಬಳ್ಳಿಯಲ್ಲಿ ೧೫೦ ಅಡಿ ಉದ್ದದ ರಾಷ್ಟ್ರಧ್ವಜದೊಂದಿಗೆ ಪಥಸಂಚಲನ ನಡೆಸಲು ಹಮ್ ಭಾರತಿ ವೆಲ್ ಫೇರ್ ಫೌಂಡೇಶನ್ ಮುಂದಾಗಿದೆ. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಫೌಂಡೇಶನ್ ಅಧ್ಯಕ್ಷ ಅನ್ವರ ಮುಲ್ಲಾ, ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಚಿನ್ಮಯ ಕಾಲೇಜಿನಿಂದ ಪ್ರಾರಂಭಗೊಳ್ಳುವ ಮೆರವಣಿಗೆಯು ಕೇಶ್ವಾಪುರದ ಮೂಲಕ ಚನ್ನಮ್ಮ ವೃತ್ತ ತಲುಪಲಿದೆ ಎಂದರು.