ನ್ಯೂಸ್

ನೆರೆ ಪರಿಹಾರ:5 ಸಾವಿರ ಕೋಟಿ ರೂ.‌ಪ್ಯಾಕೇಜ್‌ ಘೋಷಿಸಲು ಕೇಂದ್ರಕ್ಕೆ ಒತ್ತಾಯ

ಉತ್ತರ ಕರ್ನಾಟಕದ ಪ್ರವಾಹ‌ಪೀಡಿತ ಜಿಲ್ಲೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ 5 ಸಾವಿರ ಕೋಟಿ ರೂ. ಪರಿಹಾರ ಪ್ಯಾಕೇಜ್‌ ಘೋಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಗುರುವಾರ ನಗರದ‌ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಡಿಸಿ ಡಾ.ಎಂ.ಆರ್.ರವಿ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ರವಾನಿಸಿದರು. ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಎಂ.ಜಯರಾಮ್ ಮತ್ತು ಇತರರಿದ್ದರು.