ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್ ಮಾತನಾಡಿದರು. ಡಿ.ಎನ್.ಅಶ್ವನ್, ಡಾ.ಕೆ.ಓ.ನರಸಿಂಹಮೂರ್ತಿ, ಡಾ.ಅ್ರೋಜ್, ಡಾ.ಲಿಂಗರಾಜ್, ಡಾ.ವೀರಪ್ರಸಾದ್, ಡಾ.ವಿನಯ್, ಪಿ.ಪಿ.ಬೇಬಿ ಇದ್ದರು. 
ನ್ಯೂಸ್

ನೇತ್ರದಾನ, ರಕ್ತದಾನದ ಅರಿವು ಮೂಡಿಸಿ

ಎನ್.ಆರ್.ಪುರ: ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಕಳೆದ ಎರಡು ವಷರ್ದಿಂದ ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸುತ್ತಿದೆ ಎಂದು ವಿಶ್ವ ಹಿಂದು ಪರಿಷತ್‌ನ

ಶೃಂಗೇರಿ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್ ಕುಮಾರ್ ಹೇಳಿದರು.

ಸೋಮವಾರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಿಂದು ಮಹಾಗಣಪತಿ ಸಮಿತಿ, ವಿಶ್ವ ಹಿಂದು ಪರಿಷತ್ ಹಾಗೂ ಆರೋಗ್ಯ ಇಲಾಖೆ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರ ಹಾಗೂ

ನೇತ್ರದಾನದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಆಸ್ಪತ್ರೆ ಅರಿವಳಿಕೆ ತಜ್ಞ ಡಾ.ವೀರಪ್ರಸಾದ್ ಮಾತನಾಡಿ, 18 ರಿಂದ 60 ವಷರ್ದವರೆಗಿನ ಆರೋಗ್ಯವಂತರು ರಕ್ತದಾನ ಮಾಡಬಹುದು. ರಕ್ತದಾನ ಮಾಡಿದ 48 ಗಂಟೆ ಒಳಗೆ ಮತ್ತೆ

ಹೊಸ ರಕ್ತ ಉತ್ಪತ್ತಿಯಾಗಲಿದೆ ಎಂದರು.

ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಓ.ನರಸಿಂಹಮೂರ್ತಿ ಮಾತನಾಡಿ, ತಾಂತ್ರಿಕತೆ ಎಷ್ಟೇ ಮುಂದುವರಿದ್ದರೂ ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ಪ್ರಸ್ತುತ ರಕ್ತ

ಶೇಖರಣೆ ಕಡಿಮೆಯಾಗುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಶೇಖರಣೆ ಇರುವ ರಕ್ತವನ್ನು ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಏರ್ಪಡಿಸಿದರೆ ಅನುಕೂಲವಾಗಲಿದೆ ಎಂದರು. ವಿಶ್ವ ಹಿಂದು ಗಣಪತಿ ಸೇವಾ ಸಮಿತಿ ಅಧ್ಯಕ್ಷ ಡಿ.ಎನ್.ಅಶ್ವನ್, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯ ವೈದ್ಯಾಧಿಕಾರಿ ಡಾ. ಅಪ್ರೋಜ್ ಮಹಮ್ಮದ್, ಸರ್ಕಾರಿ ಆಸ್ಪತ್ರೆಯ ಡಾ.ಲಿಂಗರಾಜು, ಡಾ.ವಿನಯ್, ಕಾರ್ತಿಕ್,ಪಿ.ಪಿ.ಬೇಬಿ ಇದ್ದರು.