ನ್ಯೂಸ್

ನೇರಳಕುಪ್ಪೆ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಹನಗೋಡು ಹೋಬಳಿಯ ನೇರಳಕುಪ್ಪೆ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ಸುಮಿತಾ, ಪ್ರಕಾಶ್, ಲಕ್ಷ್ಮಿ ಇದ್ದರು. ಹನಗೋಡು.ನ14.ಪೋಟೋ ಇದೆ.

ಹನಗೋಡು: ಸಮೀಪದ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.


ಶಾಲಾ ವಿದ್ಯಾರ್ಥಿ ಸಂಘದ ನಾಯಕಿ ಲಕ್ಷ್ಮೀ ಮಾತನಾಡಿ, ದಿ.ಪಂಡಿತ್ ಜವಾಹರಲಾಲ್ ನೆಹರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ದೇಶದ ಏಳಿಗೆಗೆ ಪಂಚವಾರ್ಷಿಕ ಯೋಜನೆ ಸೇರಿದಂತೆ ಕೃಷಿ, ಕೈಗಾರಿಕೆ, ನೀರಾವರಿ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ ಧೀಮಂತ ನಾಯಕ. ಅವರ ಆದರ್ಶಗಳನ್ನು ನಾವು ಜೀವನದಲ್ಲಿ ಪಾಲಿಸಬೇಕು ಎಂದು ಕರೆ ನೀಡಿದರು.

ಮುಖ್ಯಶಿಕ್ಷಕ ಕುಮಾರಸ್ವಾಮಿ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಸುಮಿತಾ, ಸದಸ್ಯ ಪ್ರಕಾಶ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.