ನ್ಯೂಸ್

ಪತಿ ವಿರುದ್ಧ ದೂರು ನೀಡಿದ ಪತ್ನಿ

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪ್ರಿಯತಮೆ ಜತೆ ಸೇರಿ ಪತಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದು, ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಶಿವನಗರದ ನಿವಾಸಿ ಮಿಲನಾ ಎಂಬುವರು ತಮ್ಮ ಪತಿ ಶಿವಲಿಂಗ ಸ್ವಾಮಿ ಮತ್ತು ಆತನ ಪ್ರೇಯಸಿ ವಿರುದ್ಧ ದೂರು ನೀಡಿದ್ದಾರೆ.

ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ನನ್ನ ಪತಿ ಶಿವಲಿಂಗ ಸ್ವಾಮಿ ಅವರು ಅನೈತಿಕ ಸಂಬಂಧ ಹೊಂದಿದ್ದು, ಮನೆಯಲ್ಲಿ ಇಬ್ಬರೇ ಇದ್ದಾಗ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.