ವೇಮಗಲ್: ವೇಮಗಲ್&ಕುರುಗಲ್ ಪಟ್ಟಣ ಪಂಚಾಯಿತಿ ಅಧ್ಯಕ್ಷ & ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಅಧ್ಯೆಕ್ಷೆಯಾಗಿ ಅನುಷಾ ಡಿ. ಮುನಿರಾಜು ಹಾಗೂ ಉಪಾಧ್ಯಕ್ಷರಾಗಿ ಸಿ.ಎಸ್ ವೆಂಕಟೇಶ್ ಗೆಲುವು ಸಾಧಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಿಂದ ಶಶಿಕಲಾ ನಾಗೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಾಸಿಫ್ಖಾನ್ ಸ್ಪರ್ಧೆ ಮಾಡಿದ್ದು, ಕೇವಲ 7 ಮತಗಳನ್ನು ಪಡೆದು ಪರಾಭವಗೊಂಡರು. ಮೈತ್ರಿಕೂಟ 12 ಮತ ಪಡೆದು ವಿಜೇತರಾಗಿದ್ದಾರೆ.
ಅನುಷ ಡಿ ಮುನಿರಾಜು ಮೂಲತಃ ಬಿಜೆಪಿಯವರಾಗಿದ್ದು, ಜೆಡಿಎಸ್ನಿಂದ ಟಿಕೆಟ್ ಪಡೆದು ಜಯಗಳಿಸಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಕೋಲಾರ ತಹಸೀಲ್ದಾರ್ ಡಾ.ನಯನಾ ಫಲಿತಾಂಶ ಪ್ರಕಟಿಸಿದರು.
ಮಾಜಿ ಸಚಿವ ಆರ್. ವರ್ತೂರ್ ಪ್ರಕಾಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಪಂಚ ಗ್ಯಾರಂಟಿ ಯೋಜನೆಯಲ್ಲಿ ಸಾರ್ವಜನಿಕರ ಹಣ ಲೂಟಿ ಹೊಡೆಯುತ್ತಿದ್ದು, ಜನರ ಶಾಪ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಗಲುತ್ತದೆ. 2028ಕ್ಕೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದರು.
ನೂತನ ಅಧ್ಯೆಕ್ಷೆ ಅನುಷಾ ಮುನಿರಾಜ್ ಮತ್ತು ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್ ವೇಮಗಲ್ & ಕುರುಗಲ್ ಪಟ್ಟಣ ಪಂಚಾಯಿತಿಯ ಜನತೆಗೆ ಯಾವುದೇ ಅಡಚಣೆ ಆಗದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದ್ದೆ. ಆದರೆ ಕಾಂಗ್ರೆಸ್ನವರು ಬೇರೆ ಬೇರೆ ದೇಶಗಳಲ್ಲಿ ಭಾರತದ ಗೌರವಕ್ಕೆ ಚ್ಯುತಿ ತರುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ನ ದುರಾಡಳಿತಕ್ಕೆ ಸಾರ್ವಜನಿಕರು ಬೇಸತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈತ್ರಿ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.
ಅಭಿವೃದ್ಧಿ ಕಾರ್ಯಕ್ಕೆ ಗೆಲುವು: ವೇಮಗಲ್&ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮತದಾರರಿಗೆ ಭಾರೀ ಆಮಿಷ ಒಡ್ಡಿ, ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿದ್ದರು. ಕಾಂಗ್ರೆಸ್ ಭ್ರಷ್ಟಾಚಾರ ಹಣದಲ್ಲಿ ಚುನಾವಣೆ ನಡೆಸಿತ್ತು, ಮೈತ್ರಿ ಅಭ್ಯರ್ಥಿಗಳ ಮೇಲೆ ಇಲ್ಲಸಲ್ಲದ ಅಪವಾದ ಸೃಷ್ಟಿ ಮಾಡಿದ್ದರು. ಆದರೆ ಮತದಾರರು ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಮೈತ್ರಿಯನ್ನು ಬೆಂಬಲಿಸಿದ್ದಾರೆ ಎಂದು ಅಧ್ಯೆಕ್ಷೆ &ಉಪಾಧ್ಯಕ್ಷ ತಿಳಿಸಿದರು.
ಭ್ರಷ್ಟಾಚಾರದಲ್ಲಿ ಮುಳಗಿರುವ ಕಾಂಗ್ರೆಸ್ಗೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತದಾರರು ಪಾಠ ಕಲಿಸಿದ್ದಾರೆ. ಚುನಾವಣೆಯಲ್ಲಿ ನಮ್ಮ ಸದಸ್ಯರನ್ನು ಸೆಳೆಯಲು ಕೋಟಿಗಟ್ಟಲೇ ಆಮಿಷವೊಡ್ಡಿದ್ದರು. ಭ್ರಷ್ಟ ಶಾಸಕ, ಎಂಎಲ್ಸಿ ಪೊಲೀಸ್, ಅಧಿಕಾರಿಗಳನ್ನು ಕಾರ್ಯಕರ್ತರನ್ನಾಗಿಸಿಕೊಂಡಿದ್ದರು. ಆದರೂ ಸಹ ಮತದಾರರು ಎನ್ಡಿಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ಗೆ ಇದು ಪಾಠ.|ಓಂಶಕ್ತಿ ಚಲಪತಿಬಿಜೆಪಿ ಜಿಲ್ಲಾಧ್ಯಕ್ಷ