ನ್ಯೂಸ್

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ

ಪಿರಿಯಾಪಟ್ಟಣ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಪುಷ್ಪ ಆಂಗ್ಲ ಮಾಧ್ಯಮ ಶಾಲೆಯ ಸಿಬಿಎಸ್‌ಸಿ ವಿಭಾಗದ ಪ್ರಾಂಶುಪಾಲ ಫಾದರ್ ಥಾಮಸ್ ಅಭಿಪ್ರಾಯಪಟ್ಟರು.
ಪಟ್ಟಣದ ಪುಷ್ಪ ಆಂಗ್ಲ ಮಾಧ್ಯಮ ಶಾಲೆಯ ಸಿಬಿಎಸ್‌ಸಿ ವಿಭಾಗದಲ್ಲಿ ಸೋಮವಾರ ಆಯೋಜಿಸಿದ್ದ ಪರಿಸರ ದಿನ ಸಪ್ತಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರದ ಮೇಲೆ ಪ್ರತಿನಿತ್ಯ ದೌರ್ಜನ್ಯ ನಡೆಯುತ್ತಿದೆ. ಇದನ್ನು ತಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಗಂಡಾಂತರ ಎದುರಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸಬೇಕು ಎನ್ನುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ಶಾಲೆಯ ವಿದ್ಯಾರ್ಥಿಗಳು ಪರಿಸರ ಗೀತೆ ಹಾಗೂ ಪರಿಸರ ಸಂರಕ್ಷಿತ ಸಂಬಂಧಿತ ನಾಟಕ ಪ್ರದರ್ಶಿಸಿ ಗಮನ ಸೆಳೆದರು. ಶಾಲಾ ಸಂಯೋಜಕ ಪಿ.ಎಂ.ಅನಿಲ್‌ಕುಮಾರ್ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು. ಮುಖ್ಯ ಶಿಕ್ಷಕರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.