ಕಳಲವಾಡಿ ಗೇಟ್ ಬಳಿ ಪಾದಚಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಮೈಸೂರು ತಾಲೂಕಿನ ಜಯಪುರ ನಿವಾಸಿ ಸಿದ್ದಾರ್ಥ(26) ಮೃತ ಯುವಕ.
ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಡಿ.19 ರಂದು ರಾತ್ರಿ 7.30ರ ವೇಳೆಯಲ್ಲಿ ಕಳಲವಾಡಿ ಗೇಟ್ ಬಳಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಕುಟುಂಬದವರು ನೀಡಿದ ದೂರಿನ ಮೇರೆಗೆ ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.