ನ್ಯೂಸ್

ಪ್ಯಾನಲ್ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ

ಕನಾರ್ಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 03 ವರ್ಷಗಳ ಅವಧಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರಿನಲ್ಲಿ ಪ್ಯಾನಲ್ ವಕೀಲರನ್ನು ನೇಮಿಸಲು ಅರ್ಹ ಕಾನೂನು ವೃತ್ತಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಪ್ಯಾನಲ್ ವಕೀಲರುಗಳನ್ನು ಜುಲೈ.01.2022 ರಂದು ನೇಮಕ ಮಾಡಿಕೊಳ್ಳಲಾಗಿತ್ತು, ಜೂನ್ 30. 2025 ರಂದು 03 ವರ್ಷಗಳ ಸೇವಾ ಅವಧಿ ಪೂರ್ಣಗೊಳ್ಳುವ ಕಾರಣ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಇಲ್ಲಿ ಹೊಸದಾಗಿ ಪ್ಯಾನಲ್ ವಕೀಲರನ್ನು ನೇಮಕಾತಿ ಮಾಡಬೇಕಾಗಿರುತ್ತದೆ.

ಆದ್ದರಿಂದ, ಮುಖ್ಯವಾಗಿ ಸೇವಾ ಮನೋಭಾವನೆಯನ್ನು ಹೊಂದಿರುವ ಆಸಕ್ತ ನ್ಯಾಯವಾದಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮೇ 01 ರಂದು ಸಂಜೆ 05 ಗಂಟೆಯ ಒಳಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಕಛೇರಿಯಲ್ಲಿ ಅರ್ಜಿ ಸಲ್ಲಿಸಲು ತಿಳಿಸಲಾಗಿದ್ದು, ನಿಗದಿತ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶಕರಾದ ದಿನೇಶ ಬಿ.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.