ನ್ಯೂಸ್

ಪ್ರಗತಿ ಪರಿಶೀಲನಾ ಸಭೆ 10ರಂದು

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್​. ಆರ್​. ಪಾಟೀಲ ಅಧ್ಯಕ್ಷತೆಯಲ್ಲಿ ಮಾ. 10ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಗೆ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಜಿಪಂ ಸಿಇಒ ಭುವನೇಶ ಪಾಟೀಲ ತಿಳಿಸಿದ್ದಾರೆ.