ರಾವಂದೂರು: ಗ್ರಾಮೀಣ ಜನರ ಹಿತದೃಷ್ಟಿಯಿಂದ ಪ್ರತಿ ಗ್ರಾಮದಲ್ಲಿ ಉಪ ಆಹಾರ ವಿತರಣಾ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ವಿಜಿಕೊಪ್ಪಲು ಗ್ರಾಮದಲ್ಲಿ ಉಪ ಪಡಿತರ ಆಹಾರ ವಿತರಣಾ ಕೇಂದ್ರಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಜನರು ತಮ್ಮ ದೈನಂದಿನ ಕೆಲಸಗಳನ್ನು ಬಿಟ್ಟು ಪಡಿತರಕ್ಕಾಗಿ ಬಹುದೂರದ ಗ್ರಾಮಗಳಿಗೆ ತೆರಳಿ ದಿನಗಟ್ಟಲೇ ಸಮಯ ವ್ಯರ್ಥಮಾಡುತ್ತಿದ್ದರು. ಇದನ್ನು ಮನಗಂಡು ಉಪ ಆಹಾರ ವಿತರಣಾ ಕೇಂದ್ರ ಸ್ಥಾಪಿಸಲಾಗಿದೆ ಎಂದರು.
ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಮುಖ್ಯಮಂತ್ರಿಗಳನ್ನು ಕಾರ್ಯಕ್ರಮ ಉದ್ಘಾಟನೆ ಮಾಡಿಸಲಾಗುವುದು. ಅಲ್ಲದೆ ತಾಲೂಕಿನ ಎಲ್ಲ ಗ್ರಾಮಗಳಿಗೂ ಕಾವೇರಿ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಸಂಬಂಧ ಕ್ರಿಯಾಯೋಜನೆ ರೂಪಿಸಲಾಗಿದ್ದು, ಶೀಘ್ರ ಈ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.