ಎನ್.ಆರ್.ಪುರ: ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ ಹೊರ ತೆಗೆಯಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್‌ಶೆಟ್ಟಿ ತಿಳಿಸಿದರು.
ಅವರು ಶನಿವಾರ ಬಸ್ತಿಮಠ ಸಮೀಪದ ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ಆವರಣದಲ್ಲಿ ಜ್ವಾಲಾಮಾಲಿನಿ ಶಿಕ್ಷಣ ಸಂಸ್ಥೆ, ಭಗವಾನ್ ಶ್ರೀ 1008 ಚಂದ್ರಪ್ರಭ ಚಾರಿಟಬಲ್ ಟ್ರಸ್ಟ್, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಿಇಒ ಕೆ.ಆರ್.ಪುಷ್ಪಾ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗೆ ವೇದಿಕೆ ಒದಗಿಸಿದಾಗ ಪ್ರತಿಭೆ ಅರಳಲು ಅವಕಾಶ ಸಿಗಲಿದೆ. ಶಿಕ್ಷಣ ಇಲಾಖೆಯು ಮಕ್ಕಳ ಪ್ರತಿಭೆ ಹೊರ ತೆಗೆಯಲು ಪ್ರತಿಭಾ ಕಾರಂಜಿ ಏರ್ಪಡಿಸಿದೆ. ವಿದ್ಯೆ ಸಾಧಕರ ಸೊತ್ತೇ ಹೊರತು ಸೋಮಾರಿಗಳ ಸೊತ್ತಲ್ಲ ಎಂದರು.
ಕಾರ್ಯಕ್ರಮದಲ್ಲಿ ಜ್ವಾಲಾಮಾಲಿನಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಎಸ್.ಸುನೀಲ್, ಪಪಂ ಸದಸ್ಯರಾದ ಜುಬೇದಾ, ಮುಕಂದ, ಇಸಿಒ ರಂಗಪ್ಪ, ಸಂಗೀತಾ, ಬಿಐಇಆರ್‌ಟಿ ವಿಜಯಕುಮಾರ್, ಸಿಆರ್‌ಪಿಗಳಾದ ಓಂಕಾರಪ್ಪ ,ಗೀತಾ, ಅನಂತಪ್ಪ, ಬಿಆರ್‌ಪಿ ರಾಜನಾಯ್ಕ, ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಗಣಪತಿ ತಂತ್ರಿ, ಗುಣಪಾಲ್‌ಜೈನ್, ಜ್ವಾಲಾಮಾಲಿನಿ ದೇವಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಅವಿನಾ ಇದ್ದರು.