ಬಾಳೆಹೊನ್ನೂರು: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಆದರ್ಶಗಳು ಸಾರ್ವಕಾಲಿಕವಾಗಿವೆ ಎಂದು ಕರ್ನಾಟಕ ಮುಸ್ಲಿಂ ಜಮಾತ್ ವಯ ಅಧ್ಯಕ್ಷ ಹುಸೈನ್ ಮುಸ್ಲಿಯಾರ್ ಹೇಳಿದರು.
ಪ್ರವಾದಿ ಮಹಮ್ಮದ್ ಪೈಗಂಬರ್ ಅವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಮುಸ್ಲಿಂ ಜಮಾತ್ ಬಾಳೆಹೊನ್ನೂರು ವಲಯದಿಂದ ಆಯೋಜಿಸಿದ್ದ ಸೌಹಾರ್ದ ಚಹಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರೊಂದಿಗೂ ಸ್ನೇಹ, ಪ್ರೀತಿ, ಶಾಂತಿ, ಸೌಹಾರ್ದತೆಯಿಂದ ಬದುಕಬೇಕು ಎಂದು ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ತಿಳಿಸಿದ್ದರು. ಈ ಸಂದೇಶವನ್ನು ಜಗತ್ತಿನಾದ್ಯಂತ ಹರಡಬೇಕು ಎಂಬುದು ನಮ್ಮ ಆಶಯವಾಗಿದೆ. ಆಧುನಿಕ ಜಗತ್ತಿಗೆ ಪೈಗಂಬರ್ ಅವರ ಸಂದೇಶ ಮಾರ್ಗದರ್ಶಕವಾಗಿದೆ ಎಂದರು.
ಮಹಮ್ಮದ್ ಪೈಗಂಬರ್ ಅವರ 1500ನೇ ಜನ್ಮದಿನವನ್ನು ಬೆಂಗಳೂರು ಸೇರಿದಂತೆ ವಿವಿಧ ಪ್ರಾಂತ ಪ್ರದೇಶಗಳಲ್ಲಿ ವಿಶ್ವದ ಹಲವೆಡೆಯ ವಿದ್ವಾಂಸರು ಆಗಮಿಸಿ ಸಮಾವೇಶಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಪಿಎಸ್‌ಐ ರವೀಶ್ ಮಾತನಾಡಿ, ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಮುಸ್ಲಿಮರು ಸೌಹಾರ್ದ ಚಹಾ ಕಾರ್ಯಕ್ರಮ ಆಯೋಜಿಸಿ ಪರಸ್ಪರ ಶಾಂತಿ, ಸೌಹಾರ್ದತೆಯ ವಾತಾವರಣ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕೆಎಂಜೆ ಜಿಲ್ಲಾ ಕಾರ್ಯದರ್ಶಿ ಟಿ.ಟಿ.ಇಸ್ಮಾಯಿಲ್, ಸದಸ್ಯ ಸೈದಾಲಿ ಬಾವ, ಎಸ್‌ವೈಎಸ್ ಜಿಲ್ಲಾ ಕೋಶಾಧಿಕಾರಿ ಎನ್.ಕೆ.ಇಬ್ರಾಹಿಂ, ಜಿಲ್ಲಾ ಉಪಾಧ್ಯಕ್ಷ ಸ್ವಾನ್ ಸಖಾಫಿ, ಜಿಲ್ಲಾ ಕಾರ್ಯದರ್ಶಿ ಅಶ್ರ್ ಜೈನಿ, ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ, ಸದಸ್ಯರಾದ ಇಬ್ರಾಹಿಂ ಶಾಫಿ, ಎಂ.ಎಸ್.ಅರುಣೇಶ್, ಮಹಮ್ಮದ್ ಜುಹೇಬ್ ಮತ್ತಿತರರಿದ್ದರು.