ನ್ಯೂಸ್

ಪ್ರವಾದಿ ಬಗ್ಗೆ ಯತ್ನಾಳ್ ಅವಹೇಳನ ನಗರದಲ್ಲಿ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಕೋಲಾರ

ಮುಸ್ಲಿಂ ಧರ್ಮಗುರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಗಾಂಧಿವನ ಬಳಿ ಮಂಗಳವಾರ ಕೋಲಾರದ ಮುಸ್ಲಿಂ ಯುವಕರಿಂದ ಬೃಹತ್ ಪ್ರತಿಭಟನೆ ನಡೆಸಿದರು.

ಮೌಲ್ವಿ ಅತೀಖ್ ಉರ್ ರೆಹಮಾನ್ ಮಾತನಾಡಿ, ಪ್ರವಾದಿ ಮಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ಕೂಡಲೇ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು. ಇಂತಹ ಘಟನೆಗಳು ಮುಂದೆ ಯಾವುದೇ ಕಾರಣಕ್ಕೂ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಉಲೇಮಾಗಳಾದ ಮೌಲಾನ ಕಲೀಂ ಉಲ್ಲಾ, ಮೌಲ್ವಿ ಅಲೀ ಹಸನ್, ಮೌಲಾನ ಷಫಿ ಉರ್ ರೆಹಮಾನ್ ಹಾಗೂ ಹಾಗೂ ಮುಸ್ಲಿಂ ಮುಖಂಡರು ಹಾಗೂ ಯುವಕರು ಸೇರಿದಂತೆ ಸಾವಿರಾರು ಜನ ಉಪಸ್ಥಿತರಿದ್ದರು.

ಚಿತ್ರ ೧೫ ಕೆ.ಎಲ್.ಆರ್. ೦೩ : ಮುಸ್ಲಿಂ ಧರ್ಮಗುರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಗಾಂಧಿವನದಬಳಿ ಕೋಲಾರದ ಮುಸ್ಲಿಂ ಯುವಕರಿಂದ ಬೃಹತ್ ಪ್ರತಿಭಟನೆ.