ಭದ್ರಾವತಿ ಹಳೇನಗರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್ ಉದ್ಘಾಟಿಸಿದರು. ಡಾ. ವಿಜಯಾದೇವಿ, ಆರ್.ಎಸ್.ಶೋಭಾ, ನಾಗರತ್ನಾ ಇತರರಿದ್ದರು. 
ನ್ಯೂಸ್

ಪ್ರೋತ್ಸಾಹ ಸಿಕ್ಕರೆ ಸಾಧನೆಗೆ ಮತ್ತಷ್ಟು ಪ್ರೇರಣೆ

ಭದ್ರಾವತಿ: ಸಾಧನೆಗೆ ಪ್ರೋತ್ಸಾಹ ಸಿಕ್ಕಾಗ ಆ ವ್ಯಕ್ತಿ ಮತ್ತಷ್ಟು ಬೆಳೆಯಲು ಪ್ರೇರಣೆ ನೀಡಿದಂತಾಗುತ್ತದೆ ಎಂದು ಶಿವಮೊಗ್ಗ ಕಾರಾಗೃಹದ ಸಹಾಯಕ ಕಾರಾಗೃಹ ಅಧೀಕ್ಷಕಿ ಪಿ.ಭವ್ಯಾ ಹೇಳಿದರು.

ಹಳೇನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮಾತಾ ಬನಶಂಕರಿ ಸಭಾಂಗಣದಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅವರಿಗೆ ಮತ್ತಷ್ಟು ಅವಕಾಶ, ಪ್ರೋತ್ಸಾಹ ಸಿಕ್ಕರೆ ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಹಾಯವಾಗುತ್ತದೆ. ಆ ನಿಟ್ಟಿನಲ್ಲಿ ಸಮಾಜ ಹಾಗೂ ಕುಟುಂಬದ ಪ್ರಯತ್ನ ಅಗತ್ಯ ಎಂದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್, ಎಲ್ಲಿ ನಾರಿಯರನ್ನು ಪೂಜಿಸುತ್ತಾರೋ ಅಲ್ಲಿ ದೇವರು ನೆಲೆಸಿರುತ್ತಾರೆ ಎಂದು ಹೇಳಲಾಗುತ್ತದೆ. ಕುಟುಂಬದಲ್ಲಿ ಮಹಿಳೆ ಸಾಕಷ್ಟು ಮಹತ್ವ ಪಡೆದುಕೊಂಡಿದ್ದಾಳೆ ಎಂದರು.

ನಗರಸಭೆ ಪೌರ ಕಾರ್ಮಿಕರಾದ ಲಕ್ಷ್ಮಮ್ಮ ಸೋಮಣ್ಣ, ಆಶಾ ಕಾರ್ಯಕರ್ತೆ ರಾಜೇಶ್ವರಿ ನಂದೀಶ್, ಅಂಗನವಾಡಿ ಕಾರ್ಯಕರ್ತೆ ಟಿ.ಮಂಜುಳಾ ಮಂಜುನಾಥ್ ಅವರನ್ನು ಗೌರವಿಸಲಾಯಿತು.

ಮಹಿಳಾ ಸಮಾಜದ ಅಧ್ಯಕ್ಷೆ ನಾಗರತ್ನಾ ವಾಗೀಶ್ ಕೋಠಿ, ಪ್ರಾಧ್ಯಾಪಕಿ ಡಾ. ವಿಜಯಾದೇವಿ, ಸಮಾಜದ ಗೌರವಾಧ್ಯಕ್ಷೆ ಆರ್.ಎಸ್.ಶೋಭಾ, ಉಪಾಧ್ಯಕ್ಷೆ ವಿಜಯಾ ಜಗನ್ನಾಥ್ ಇತರರಿದ್ದರು.