ನ್ಯೂಸ್

ಫೆ.24ಕ್ಕೆ ವಿಟಿಯು 22ನೇ ಘಟಿಕೋತ್ಸವ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವನ್ನು ಫೆ.24 ರಂದು ವಿವಿಯ ಜ್ಞಾನ ಸಂಗಮದ ಅಬ್ದುಲ್‌ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾ‌ನ ಮಾಡಲಾಗುವುದು ಎಂದು ಕುಲಪತಿ ಪ್ರೊ. ವಿದ್ಯಾಶಂಕರ ಎಸ್. ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಹಿಸುವರು. ಘಟಿಕೋತ್ಸವದ ಭಾಷಣವನ್ನು ದೆಹಲಿಯ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ನ ಅಧ್ಯಕ್ಷ ಪ್ರೊ. ಟಿ.ಜಿ.ಸೀತಾರಾಮ್ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾಯರಾಯಣ ಉಪಸ್ಥಿತರಿರುವವರು. ವಿವಿಯ ಘಟಿಕೋತ್ಸವದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ‌ಸೇವೆ ಸಲ್ಲಿಸಿದ ಟೋಯೊಟಾ ಕಿರ್ಲೋಸ್ಕರ್ ಮೋಟರ್ಸ್ ನ ವಿಕ್ರಮ್ ಕಿರ್ಲೋಸ್ಕರ್ ಅವರಿಗೆ ಮರಣೋತ್ತರ, ಎಂ.ಲಕ್ಷ್ಮೀ ನಾರಾಯಣ ಹಾಗೂ ಉದ್ಯಮಿ‌ ಸಚಿನ ಸಬ್ನಿಸ್ ಅವರಿಗೆ 'ಡಾಕ್ಟರ್ ಆಫ್ ಸೈನ್ಸ್' ಪದವಿ ಪ್ರಧಾನ ಮಾಡಲಾಗುವುದು ಎಂದರು.
ಸಿವಿಲ್ ಇಂಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರಿನ ಮುರುಳಿ ಎಸ್. ವಿದ್ಯಾರ್ಥಿ 18 ಚಿನ್ನದ ಪದಕ‌ ಪಡೆದಿದ್ದಾನೆ.‌ ಇದು ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಾಧನೆ ಮಾಡಿದ ವಿದ್ಯಾರ್ಥಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕುರುಂಜಿ ವೆಂಕಟರಮನ್ ಗೌಡ ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯಾದ ವಿದ್ಯಾರ್ಥಿನಿ 8 ಚಿನ್ನದ ಪದಕ ಪಡೆದಿದ್ದಾರೆ ಎಂದರು.
ಪ್ರೊ. ಬಿ.ಈ.ರಂಗಸ್ವಾಮಿ, ಡಾ. ಪಿ.ಎನ್.ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿದ್ದರು.