ನ್ಯೂಸ್

ಫೆಬ್ರವರಿಯಲ್ಲಿ ಸಂಪುಟ ಸರ್ಜರಿ? ಸಂಪುಟದ ಹಿರಿಯ ಸಹೋದ್ಯೋಗಿಯೊಬ್ಬರ ಸುಳಿವು

ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗುವ ಸಾಧ್ಯತೆ ಇದೆ. ಈ ಕುರಿತಂತೆ ಸಂಪುಟದ ಹಿರಿಯ ಸಹೋದ್ಯೋಗಿಯೊಬ್ಬರು ಸುಳಿವು ನೀಡಿದ್ದಾರೆ. ಸದ್ಯ 4 ಸಚಿವ ಸ್ಥಾನಗಳು ಖಾಲಿ ಇದ್ದು, 10ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರೂ ಪುನಃ ಸಂಪುಟ ಸೇರುವ ಆಕಾಂಕ್ಷಿಯಾಗಿದ್ದಾರೆ. ಕಾರ್ಯಕ್ಷಮತೆ ತೋರದ ಕೆಲ ಸದಸ್ಯರ ಜತೆಗೆ 2-3 ಸಚಿವರನ್ನು ಕೈಬಿಟ್ಟು ಸಂಪುಟಕ್ಕೆ ಸರ್ಜರಿ ಆಗುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಸದ್ಯಕ್ಕೆ ಅಂತಹ ಪ್ರಸ್ತಾಪ ಇಲ್ಲ. ಬೊಮ್ಮಾಯಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ.

| ವಿ.ಸೋಮಣ್ಣ ವಸತಿ ಸಚಿವ

ಸಂಪುಟ ವಿಸ್ತರಣೆ ಬಗ್ಗೆ ಈಗಲೇ ಏನು ಹೇಳಲು ಸಾಧ್ಯವಿಲ್ಲ, ವರಿಷ್ಠರ ಜತೆ ಮಾತನಾಡದೆ ಹೇಳುವುದು ಅಸಾಧ್ಯ, ಕಾದು ನೋಡಿ.

| ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ