ಬನ್ನಿಕುಪ್ಪೆ: ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಇತ್ತೀಚೆಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉಪನ್ಯಾಸಕ ಸೋಮಶೇಖರ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮತ್ತು ಧೂಮಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಮೊಬೈಲ್ ಬಳಕೆ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕ ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ವ್ಯಸನ ಮುಕ್ತ ಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ಮತ್ತು ಮಾದಕ ಪದಾರ್ಥಗಳ ಸೇವನೆ ನಿಯಂತ್ರಿಸುವಲ್ಲಿ ಯಾವ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸಿ, ಬಹುಮಾನ ವಿತರಣೆ ಮಾಡಲಾಯಿತು.
ಹುಣಸೂರು ತಾಲೂಕಿನ ಯೋಜನಾಧಿಕಾರಿ, ಧನಂಜಯ್, ಜನಜಾಗೃತಿ ವೇದಿಕೆ ಸದಸ್ಯರಾದ ಉಮೇಶ್, ಉಪನ್ಯಾಸಕರಾದ ಅನಿತಾ, ಭಾಗ್ಯಾ, ಶರ್ಮಿಳಾ, ಮಹದೇವಸ್ವಾಮಿ, ಮೇಲ್ವಿಚಾರಕರಾದ ರೇಖಾ, ಸೇವಾ ಪ್ರತಿನಿಧಿ ಪವಿತ್ರಾ, ವಿದ್ಯಾ ಇದ್ದರು.