ಕಡೂರು: ಬಳ್ಳೇಕೆರೆ ಗ್ರಾಪಂ ಅಧ್ಯಕ್ಷೆಯಾಗಿ ಪೂರ್ಣಿಮಾ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ತಾಪಂ ಇಒ ಸಿ.ಆರ್.ಪ್ರವೀಣ್ ಕಾರ್ಯನಿರ್ವಹಿಸಿದರು. ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ, ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ಕೊಡಲಾಗುತ್ತದೆ ಎಂದರು. ಉಪಾಧ್ಯಕ್ಷ ಬಸವರಾಜ್, ಬಿ.ರಾಜಪ್ಪ, ಶೇಖರಪ್ಪ, ಸೋಮಶೇಖರಪ್ಪ, ಡಿ.ಸತ್ಯ, ಚಂದ್ರಮ್ಮ, ಪಿಡಿಒ ದಯಾನಂದ್ ಇತರರಿದ್ದರು.