ನ್ಯೂಸ್

ಬಾಲ್ಯ ವಿವಾಹ ಪ್ರಕರಣ ಪತ್ತೆ

ನಂಜನಗೂಡು: ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ಬಾಲ್ಯ ವಿವಾಹ ಪ್ರಕರಣ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಬಾಲಕಿ ಪತಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


ಅಪ್ರಾಪ್ತೆ ಹೆರಿಗೆಗೆಂದು ಆಸ್ಪತ್ರೆಗೆ ತೆರಳಿದಾಗ ವಯಸ್ಸು ತಿಳಿದು ಬಂದಿದ್ದು ಆಕೆ ಅಪ್ರಾಪ್ತೆ ಎಂಬುದು ಧೃಢಪಟ್ಟಿದೆ. ಬಳಿಕ ಆಸ್ಪತ್ರೆಯವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ನಂತರ ಬಿಳಿಗೆರೆ ವೃತ್ತದ ಸಿಡಿಪಿಒ ಈ ಬಗ್ಗೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪಿಎಸ್‌ಐ ಆರತಿ ತನಿಖೆ ಕೈಗೊಂಡಿದ್ದಾರೆ.