ನ್ಯೂಸ್

ಬಿ.ವಿ.ಎ ಪದವಿಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊoಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ ಪದ್ಧತಿ) ದೃಶ್ಯ ಕಲೆಯಲ್ಲಿ 2025-26ನೇ ಶೈಕ್ಷಣಿಕ ಶಾಲೆಗೆ ಪ್ರಥಮ ಬಿ.ಬಿ.ಎ ಪದವಿ ಪ್ರವೇಶಾತಿಗಾಗಿ ಬಾಕಿ ಉಳಿದಿರುವ ಸೀಟುಗಳಿಗೆ ಮೈಸೂರು ವಿಶ್ವವಿದ್ಯಾನಿಲಯದ ಅಧಿಸೂಚನೆ ಸಂ:ಎಸಿ-9/01/2025-26 ಮೇ 22 ರಂದು ರೂ. 500/-ಗಳ ದಂಡ ಶುಲ್ಕದೊಂದಿಗೆ ಪ್ರವೇಶಾತಿಗೆ ಅವಕಾಶ ಕಲ್ಪಸಿ ಆನ್‌ಲೈನ್ (UUCMS) ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 05 ಕೊನೆಯ ದಿನಾಂಕವಾಗಿರುತ್ತದೆ.

 ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪ ಕಲೆ, ಗ್ರಾಫಿಕ್ಸ್ ಕಲೆ (ಅಚ್ಚು ಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

 ಅಂತರ್ಜಾಲದ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ 07 ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 02 ಗಂಟೆಗೆ ವೈಯಕ್ತಿಕ ಸಂದರ್ಶನ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in   ಅಥವಾ https://www.cavamysore.karnataka.gov.inಈ ಕಾರ್ಯಾಲಯದ ಸಹಾಯವಾಣಿಗೆ 0821-2438931 ನ್ನು ಸಂಪರ್ಕಿಸಬಹುದಾಗಿದೆ ಎಂದು ಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.