ನ್ಯೂಸ್

ಬಿ.ವಿ.ಎ ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ), ಮೈಸೂರು ಸಂಸ್ಥೆಯ 2025/26ನೇ ಶೈಕ್ಷಣಿಕ ಸಾಲಿನ ಬಿ.ವಿ.ಎ ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಿಗಧಿಪಡಿಸಿದ ಸಂಭಾವನೆ ಆಧಾರದ ಮೇಲೆ (ಪ್ರತಿ ಗಂಟೆಯ ಉಪನ್ಯಾಸಕ್ಕೆ ರೂ. 500.00 (ರೂಪಾಯಿ ಐದು ನೂರು ಮಾತ್ರ)ಗಳಂತೆ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಬಿ.ವಿ.ಎ/ ಎಂ.ವಿ.ಎ ವಿದ್ಯಾರ್ಥಿಗಳು ಸೇರಿದಂತೆ ಬೋಧನಾ ವಿಷಯ ನಿಗಧಿಪಡಿಸಿದ ವಿದ್ಯಾರ್ಹತೆ ಬೋಧನಾ ಸೆಮಿಸ್ಟರ್: ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ಎಸ್.ಇ.ಸಿ ಪೇಪರ್ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಕಾನೂನು ವಿಷಯದಲ್ಲಿ (LLMಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ 55% ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ಪ್ರಥಮ ಸೆಮಿಸ್ಟರ್, Cyber Security / Artificial Intelligence (AI)ಎಸ್.ಇ.ಸಿ ಪೇಪರ್, ಅಂಗೀಕೃತ ವಿಶ್ವವಿದ್ಯಾನಿಲಯ ದಿಂದ M.sc., (ITಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ 55% ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ಐದನೇ ಸೆಮಿಸ್ಟರ್, ಪರಿಸರ ಅಧ್ಯಯನ (EVS) ಎಸ್.ಇ.ಸಿ ಪೇಪರ್ ಅಂಗೀಕೃತ ವಿಶ್ವವಿದ್ಯಾನಿಲಯದಿಂದ (M.sc., in EVSಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ 55% ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ದ್ವಿತೀಯ ಸೆಮಿಸ್ಟರ್ ಹೊಂದಿರಬೇಕು.

 ಅರ್ಜಿ ಸಲ್ಲಿಸಲು ಜುಲೈ 18 ರಂದು ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಜುಲೈ 21 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು. ತರಗತಿಗಳು ಅನ್ವಯವಾಗುವಂತೆ ಕಾರ್ಯನಿರ್ವಹಿಸಲು ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ www.cavamysore.karnataka.gov.inಅಂತರ್ಜಾಲದ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 0821-2438931 ನ್ನು ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ, ದೃಶ್ಯಕಲಾ ಕಾವಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.