ಎನ್.ಆರ್.ಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಬಡ್ತಿ ಮುಖ್ಯಶಿಕ್ಷಕರ ಸಂಘದಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬೋಗೇಶಪ್ಪ, ನಾಗರಾಜ್, ಮಂಜಪ್ಪ, ಹೇಮರಾಜ್ ಮತ್ತಿತರರಿದ್ದರು. 
ನ್ಯೂಸ್

ಬಿಎಲ್‌ಒ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಿ

ಎನ್.ಆರ್.ಪುರ: ಸರ್ಕಾರವು ಬಿಎಲ್‌ಒ ಕಾರ್ಯಕ್ಕೆ ಶಿಕ್ಷಕರನ್ನು ಕೈಬಿಡಬೇಕು ಎಂದು ಆಗ್ರಹಿಸಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಬಡ್ತಿ ಮುಖ್ಯಶಿಕ್ಷಕರ ಸಂಘದಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.

ರಾಜ್ಯ ಬಡ್ತಿ ಮುಖ್ಯಶಿಕ್ಷಕರ ಸಂಘದ ಉಪಾಧ್ಯಕ್ಷ ಎ.ಇ.ಅಶೋಕ್ ಮಾತನಾಡಿ, ಶಾಲಾ ಅವಧಿಯಲ್ಲಿ ಯಾವುದೇ ಸಮಾರಂಭ, ತರಬೇತಿಗೆ ಶಿಕ್ಷಕರನ್ನು ನಿಯೋಜನೆ ಮಾಡದಂತೆ ಶಿಕ್ಷಣ ಇಲಾಖೆ ಆದೇಶ ನೀಡಿದ್ದನ್ನು ಸ್ವಾಗತಿಸುತ್ತೇವೆ. ಇದರಿಂದ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಹಾಯವಾಗಲಿದೆ ಎಂದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಂಜುಂಡಪ್ಪ ಮಾತನಾಡಿ, ಬಿಎಲ್‌ಒ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಬೋಗೇಶಪ್ಪ, ಪದಾಧಿಕಾರಿಗಳಾದ ನಾಗರಾಜ್, ಮಂಜಪ್ಪ, ಹೇಮರಾಜ್, ಮಂಗಳ ಗೌರಮ್ಮ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ರಾಜಾ ನಾಯ್ಕ, ಶಿಕ್ಷಕರಾದ ದೇವರಾಜ್, ಪ್ರಕಾಶ್, ಸಲ್ಲಾಉದ್ದೀನ್, ಕೆಂಚಪ್ಪ ಮತ್ತಿತರರಿದ್ದರು.