ನ್ಯೂಸ್

ಬಿಎಸ್‌ವೈ ರಾಜಕೀಯ ನಿವೃತ್ತಿ ಎಂಬುದು ಸುಳ್ಳು ಎಂದ ಜ್ಯೋತಿಗಣೇಶ್

ತುಮಕೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿ ಎಂಬುದು ಸುಳ್ಳು, ವಯಸ್ಸಿನ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆಯಷ್ಟೇ ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರು, ಭವಿಷ್ಯದಲ್ಲಿಯೂ ಅವರೇ ನಮ್ಮ ನಾಯಕರಾಗಿರುತ್ತಾರೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆಯಲ್ಲಿ ಎದುರಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ನಗರದ ದಾಸಮುದ್ದಯ್ಯನ ಪಾಳ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಹಿರಿಯ ರಾಜಕಾರಣಿಗಳು ಸಕ್ರೀಯ ರಾಜಕಾರಣದಿಂದ ನೇಪಥ್ಯಕ್ಕೆ ಸರಿದರೆ ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ದೇವೇಗೌಡರು 92 ವರ್ಷದಲ್ಲೂ ಸಕ್ರಿಯ ರಾಜಕಾರಣದಲ್ಲಿ ಇದ್ದು ಕೆಲಸ ಮಾಡುತ್ತಿದ್ದಾರೆ, ಅಂತಹ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ಅತಿ ಅಗತ್ಯ ಎಂದರು.

ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತಿದ್ದಾರೆ. ಅವರಿಗೆ ಶಿಕಾರಿಪುರದಲ್ಲಿ ಸ್ಫರ್ಧಿಸಲು ಬಿಎಸ್‌ವೈ ಅವಕಾಶ ನೀಡಿದ್ದಾರೆ ಇದರಲ್ಲಿ ತಪ್ಪೇನಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ ಹೊರತು, ರಾಜಕೀಯದಿಂದ ದೂರವಾಗುವುದಾಗಿ ಅವರು ಎಲ್ಲು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.