ನ್ಯೂಸ್

ಬಿಜೆಪಿ ಕಾರ್ಯಕರ್ತರ ವಿಶೇಷ ಸಭೆ

ಬಿಜೆಪಿ ಮೈಸೂರು ಗ್ರಾಮಾಂತರ ಘಟಕದ ವತಿಯಿಂದ ಜುಲೈ 6 ರಂದು ಮಧ್ಯಾಹ್ನ 2 ಗಂಟೆಗೆ ರಾಮಾನುಜ ರಸ್ತೆಯ ರಾಜೇಂದ್ರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಂಘಟನಾತ್ಮಕ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಘಟಕದ ಅಧ್ಯಕ್ಷ ಕೆ.ಎನ್.ಸುಬ್ಬಣ್ಣ ತಿಳಿಸಿದರು.

ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತತ್ವದಲ್ಲಿ ನಡೆಯುವ ಈ ವಿಶೇಷ ಸಭೆಯಲ್ಲಿ ಬಿಜೆಪಿ ಮುಖಂಡರು, ಸಂಸದರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಹಾಗೂ ಪಕ್ಷದ ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಬೂತ್ ಮಟ್ಟದ ಅಧ್ಯಕ್ಷರು ಭಾಗವಹಿಸುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಯಾವುದೇ ಚುನಾವಣೆ ಎದುರಾದರೂ ಎದುರಿಸಲು ನಮ್ಮ ಪಕ್ಷ ಸಿದ್ಧವಾಗಿದೆ. ಪಕ್ಷವನ್ನು ಗಟ್ಟಿಗೊಳಿಸಲು ಹಾಗೂ ಸಂಘಟಿಸುವ ಅವಶ್ಯಕತೆ ಇದೆ. ಹಾಗಾಗಿ ರಾಜ್ಯಾಧ್ಯಕ್ಷ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಮುಖಂಡರಾದ ಸುರೇಶ್ ಬಾಬು, ಮಹದೇವಸ್ವಾಮಿ ಇತರರಿದ್ದರು.