ನ್ಯೂಸ್

ಬಿಜೆಪಿ ಪ್ರತಿಭಟನೆ ಸೆ.10ರಂದು

ಕಲಬುರಗಿ: ವಿಧಾನ ಪರಿಷತ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಸಚಿವ ಎಂ.ಬಿ.ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮಂಗಳವಾರ ಬೆಳಗ್ಗೆ ೧೦.೩೦ಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ.ಅಂಬಾರಾಯ ಅಷ್ಠಗಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.