ನ್ಯೂಸ್

ಬಿಜೆಪಿಯಲ್ಲಿದೆ ಮಹಿಳೆಯರಿಗೆ ಗೌರವ

ಚಿಕ್ಕೋಡಿ: ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಮಹಿಳೆಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಪಕ್ಷದ ಮಹಿಳಾ ಕಾರ್ಯಕರ್ತರು ಪ್ರತಿ ಮಹಿಳೆಯರಿಗೆ ಮುಟ್ಟಿಸುವ ಕಾರ್ಯ ಮಾಡಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಪಟ್ಟಣದ ಕೇಶವ ಕಲಾ ಭವನದಲ್ಲಿ ಬುಧುವಾರ ಬಿಜೆಪಿ ಮಹಿಳಾ ಮೋರ್ಚಾ ಚಿಕ್ಕೋಡಿ ಟಕದಿಂದ ಬುಧವಾರ ಆಯೋಜಿಸಿದ್ದ ಪ್ರಶಿಣ ವರ್ಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಬೇರೆ ಪಗಳಿಗಿಂತ ಭಿನ್ನ.

ಇಲ್ಲಿ ಮಹಿಳೆಯರಿಗೆ ವಿಶೇಷ ಗೌರವ, ಸ್ಥಾನಮಾನಗಳಿವೆ ಎಂದರು. ವಿಧಾನ ಪರಿಷತ್​ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಲ್ಲಿ ಬದಲಾವಣೆ ತರುವ ಮಹತ್ತರ ಕಾರ್ಯ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತರಿಗೆ 10 ಸಾವಿರ ರೂ. ಹಣವನ್ನು ಅವರ ಬ್ಯಾಂಕ್​ ಖಾತೆಗೆ ಜಮಾ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದರು. ಡಾ. ರಾಜೇಶ ನೇರ್ಲಿ, ವಿಜಯಲಕ್ಷಿ$್ಮ ಉಕುಮನಾಳ, ವಿಜಯಲಕ್ಷಿ$್ಮ ಹಮಿದಖಾನೆ, ಶಾಂಭವಿ ಅಶ್ವತ್ಥಪುರ, ಗೀತಾ ಭಾತೆ ಇದ್ದರು.