ನ್ಯೂಸ್

ಬಿಡಿಎಗೆ ಕಾಯಕಲ್ಪ: ವಿಶ್ವನಾಥ್ ಸಂಕಲ್ಪ

ಕೆಂಪೇಗೌಡ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರ ಚಾಲನೆ

ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗದೇ ಏನಾದರೂ ಸಮಸ್ಯೆಗಳಿದ್ದರೆ ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು ಎಂದರು.

ಸಂಸ್ಥೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ಜನಸ್ನೇಹಿಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಭ್ರಷ್ಟ ಅಧಿಕಾರಿಗಳಿಂದ ಸಂಸ್ಥೆಗೆ ಕಪ್ಪು ಚುಕ್ಕೆ ಬಂದಿದೆ. ಇದನ್ನು ತೊಡೆದು ಹಾಕುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನಗೆ ನೀಡಿದ್ದಾರೆ ಎಂದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ಬಿಡಿಎ ನೂತನ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.

ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಈಗಾಗಲೇ ಹಣ ಪಾವತಿಸಿರುವ ಸಾರ್ವಜನಿಕರಿಗೆ ಅರ್ಕಾವತಿ ಮತ್ತು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನಿವೇಶನ ಹಂಚಿಕೆಗೆ ಚಾಲನೆ:

ರೈತರ ಮನವೊಲಿಸಿ ಭೂ ಸ್ವಾಧೀನ:
ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ದಿಸೆಯಲ್ಲಿ ರೈತರ ಮನವೊಲಿಸಿ ಭೂಸ್ವಾಧೀನ ಮಾಡಿಕೊಳ್ಳಲಾಗುವುದು ಎಂದರು.
ನಗರದ ಸಂಚಾರ ದಟ್ಟಣೆ ನಿವಾರಣೆ ಮಾಡುವ ದೃಷ್ಟಿಯಿಂದ ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫರೆಲ್ ರಿಂಗ್ ರಸ್ತೆ ನಿರ್ಮಾಣ ಮಾಡಲು ಬಿಡಿಎ ಬದ್ಧವಾಗಿದೆ. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಜನವಿರೋಧಿ ಸಿಬ್ಬಂದಿ ಸಹಿಸಲ್ಲ:
ಬಿಡಿಎ ನಲ್ಲಿ ಜನ ವಿರೋಧಿ ಸಿಬ್ಬಂದಿಯನ್ನು ಸಹಿಸುವುದಿಲ್ಲ. ಮುಂದಿನ ಒಂದು ವರ್ಷದೊಳಗೆ ಸಂಸ್ಥೆಯನ್ನು ಆರ್ಥಿಕವಾಗಿ ಸಬಲವನ್ನಾಗಿ ಮಾಡಲಿದ್ದೇವೆ ಎಂದು ವಿಶ್ವನಾಥ್ ತಿಳಿಸಿದರು.

ಬಾಕ್ಸ್:
ಸಿಎಂರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ರಾಜೀನಾಮೆ ನೀಡಿದ್ದಾರೆ. ಸರ್ಕಾರ ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.