ನ್ಯೂಸ್

ಬೆಂಗಳೂರು ನಾರ್ತ್ ರೌಂಡ್ ಟೇಬಲ್ ಟ್ರಸ್ಟ್ ವತಿಯಿಂದ ಪ್ರಥಮ ದರ್ಜೆ ಕಾಲೇಜಿಗೆ ೨೫ ಲಕ್ಷ ವೆಚ್ಚದ ವಿಶ್ರಾಂತಿ ಗೃಹ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ

ವಿಜಯವಾಣಿ ಸುದ್ದಿಜಾಲ ಕೋಲಾರ
ಕೋಲಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು ೧೭೦೦ ವಿದ್ಯಾರ್ಥಿಗಳಿದ್ದು, ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಕಾಲೇಜಿನಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳಿದ್ದು, ಅದರಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯಗಳು ಪ್ರಮುಖವಾಗಿದ್ದು, ಇದನ್ನರಿತ ಬೆಂಗಳೂರು ಖಾಸಗಿ ಸಂಸ್ಥೆಯಾದ ಬೆಂಗಳೂರು ನಾರ್ತ್ ರೌಂಡ್ ಟೇಬಲ್ ಟ್ರಸ್ಟ್ ವತಿಯಿಂದ ರೂ.೨೫ ಲಕ್ಷ ವೆಚ್ಚದ ವಿಶ್ರಾಂತಿ ಗೃಹ ಹಾಗೂ ಶೌಚಾಲಯಗಳ ನಿರ್ಮಾಣ ಕಾರ್ಯಕ್ಕೆ ಸಂಸ್ಥೆಯ ಅಧ್ಯಕ್ಷರಾದ ಟಿ.ಆರ್. ಅನಿರುದ್ಧ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಸಂಸ್ಥೆಯ ಅಧ್ಯಕ್ಷ ಟಿ.ಆರ್. ಅನಿರುದ್ಧ ರವರು ಮಾತನಾಡಿ, ನಮ್ಮ ಸಂಸ್ಥೆಯು ಸುಮಾರು ೧೫ ವರ್ಷಗಳಿಂದ ಫ್ರೀಡಂ ಟು ಎಜುಕೇಶನ್ ಎಂಬ ಗುರಿಯನ್ನು ಇಟ್ಟುಕೊಂಡು ಬೆಂಗಳೂರು ಮತ್ತು ಸುತ್ತಮುತ್ತಲಿನ ಶಾಲೆ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದೇ ನಮ್ಮ ಸಂಸ್ಥೆಯ ಮುಖ್ಯ ಗುರಿಯಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿನಿಯರು ಶಾಲಾ ಕಾಲೇಜುಗಳಿಗೆ ಬರಲು ಇನ್ನೂ ಹಿಂಜರಿಯುತ್ತಿದ್ದು, ಅವರಿಗೆ ಮೂಲಭೂತ ಸೌಲಭ್ಯಗಳಾದ ಸುಸಜ್ಜಿತವಾದ ಶೌಚಾಲಯಗಳನ್ನು ಕಲ್ಪಿಸಬೇಕಾಗಿದೆ. ಸಾಕಷ್ಟು ವಿದ್ಯಾರ್ಥಿನಿಯರು ಋತುಮಾನ ಸಂದರ್ಭದಲ್ಲಿ ಕಾಲೇಜಿಗೆ ಡ್ರಾಪ್ ಓಟ್ ಆಗುವುದು ಸಹಜವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಇನ್ನು ನಿರಂತರವಾಗಿದೆ. ಇಂತಹ ಸಮಸ್ಯೆಗಳು ಮರುಕಳಿಸದಂತೆ ಮಾಡಲು ನಮ್ಮ ಸಂಸ್ಥೆ ವಿದ್ಯಾರ್ಥಿನಿಯರಿಗಾಗಿಯೇ ಮಹಿಳಾ ವಿಶ್ರಾಂತಿ ಗೃಹ ಮತ್ತು ಶೌಚಾಲಯ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದೇವೆ ಎಂದರು.

ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಸುಸಜ್ಜಿತ ಕಟ್ಟಡದಲ್ಲಿ ೧೦ ಇಂಡಿಯನ್ ೨ ವೆಸ್ಟರ್ನ್ ಶೌಚಾಲಯಗಳು ಒಳಗೊಂಡಿರುತ್ತದೆ. ಇಲ್ಲಿ ವಿದ್ಯಾರ್ಥಿನಿಯರು ವಿಶ್ರಾಂತಿ ಜೊತೆಗೆ ನ್ಯಾಪ್ಕಿನ್ ಬರ್ನಿಂಗ್ ಮಿಷನ್ ಸಹ ನೀಡಲಾಗುತ್ತದೆ ಎಲ್ಲಾ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಸಿಬ್ಬಂದಿಯವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀನಿವಾಸಗೌಡರು ವಹಿಸಿದ್ದು, ಕಾಲೇಜಿನಲ್ಲಿ ಗ್ರಂಥಾಲಯ ತುಂಬಾ ಹಳೆಯದಾಗಿದೆ ಅದನ್ನು ನವೀಕರಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಗುತ್ತಿಗೆದಾರ ಸತೀಶ್, ಪ್ರಾಜೆಕ್ಟ್ ಡೈರೆಕ್ಟರ್ ರೋಹಿತ್, ಡಾ.ರಾಜಕುಮಾರ್ ಪ್ಯಾಟ್ರಿಕ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಮುರುಳಿಧರ್, ಡಾ. ತ್ಯಾಗರಾಜ್ ಎಲ್ಲ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಕಾಲೇಜಿನ ಸಿಬ್ಬಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಚಿತ್ರ ೦೮ ಕೆ.ಎಲ್.ಆರ್. ೦೧ : ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯಕ್ಕೆ ಬೆಂಗಳೂರು ಖಾಸಗಿ ಸಂಸ್ಥೆಯಾದ ಬೆಂಗಳೂರು ನಾರ್ತ್ ರೌಂಡ್ ಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ನ ಅಧ್ಯಕ್ಷ ಟಿ.ಆರ್. ಅನಿರುದ್ಧ ಭೂಮಿ ಪೂಜೆ ನೆರವೇರಿಸಿದರು. ಪ್ರಾಂಶುಪಾಲ ಶ್ರೀನಿವಾಸಗೌಡ ಇದ್ದರು.