-ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ
-ಯೋಗ ವಿ.ವಿ., ಮತ್ತಿತರ ಸಂಸ್ಥೆಗಳಿಗೆ ಜಮೀನು ನೀಡುವುದು ಬೇಡ
ಬೆಂಗಳೂರು ವಿ.ವಿ. ಜೀವ ವೈವಿಧ್ಯ ತಾಣ ಉಳಿಸಿ
ಬಯಲು ಪ್ರಯೋಗಾಲಯ:
ಬೆಂಗಳೂರು ವಿ.ವಿ. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಕಳೆದ 20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿ.ವಿ ಮತ್ತು ಸರ್ಕಾರದ ಕ್ರಮ ಖಂಡನೀಯ. ಇದರಿಂದ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ ಎಂದು ಎಚ್ಚರಿಸಿದ್ದಾರೆ.
20 ವರ್ಷ ಶ್ರಮದ ವನ:
ಯೋಗ ವಿ.ವಿ.ಗೆ 15 ಎಕರೆ, ಕಲಬುರಗಿ ವಿ.ವಿ.ಗೆ 15 ಎಕರೆ, ಸಿ.ಬಿ.ಎಸ್.ಸಿ. ದಕ್ಷಿಣ ಭಾರತದ ಕಚೇರಿಗೆ 2 ಎಕರೆ ಸೇರಿದಂತೆ ಒಟ್ಟು 32 ಎಕರೆಯನ್ನು ನೀಡಿರುವ ಕ್ರಮದಿಂದ ಬೆಂಗಳೂರು ವಿ.ವಿ. ಆವರಣ ಕಾಂಕ್ರೀಟ್ ಕಾಡಾಗಲಿದೆ. ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳ ನೀಡುವ ಮೂಲಕ ಜೀವವೈವಿಧ್ಯ ತಾಣವನ್ನು ಸರ್ಕಾರ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಕ್ರೀಟ್ ಕಾಡು:
ಹಿರಿಯ ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಅವರು ತಮಗೆ ಸರ್ಕಾರ ನೀಡಿದ್ದ ಗೌರವ ಡಾಕ್ಟರೇಟ್ ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲ ಸೂಚಿಸಿದ್ದಾರೆ ಎಂದು ನೆನಪಿಸಿದ್ದಾರೆ.
ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರ್ಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ ಎಂದು ಹೇಳಿದ್ದಾರೆ.
ಜೀವವೈವಿಧ್ಯದ ತಾಣವಾಗಿರುವ ಬೆಂಗಳೂರು ವಿ.ವಿ. ಆವರಣದ 32 ಎಕರೆ ಪ್ರದೇಶವನ್ನು ಯೋಗ ವಿ.ವಿ. ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡುವ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವವೈವಿಧ್ಯ ವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಭೂಗರ್ಭಶಾಸ್ತ್ರ, ಪರಿಸರ ವಿಜ್ಞಾನ, ಸಾಮಾಜಿಕ ವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ.ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಬೇಕು. ಬೆಳೆಸಬೇಕು ಎಂದು ಸಲಹೆ ನೀಡಿದ್ದಾರೆ.